Breaking News

ಕಣಬರ್ಗಿ ಸಿದ್ದೇಶ್ವರ ಮಂದಿರದ ಭವ್ಯ ಕಳಸಾರೋಹಣ ಕಾರ್ಯಕ್ರಮ

Spread the love

ಬೆಳಗಾವಿ-: ಜಿಲ್ಲೆಯ ಕಣಬರ್ಗಿ ಗ್ರಾಮದ ಆರಾಧ್ಯ ದೇವರಾದ ಶ್ರೀ ಸಿದ್ದೇಶ್ವರ ಮಂದಿರದ ಪುರಾತನ ಕಟ್ಟಡವನ್ನು ಜಿರ್ಣೋದ್ದಾರ ಮಾಡಿ ನವೀಕೃತ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡ ಕಾಮಗಾರಿಗೆ ಅನೇಕ ಭಕ್ತರು ಸಹ ಉದಾರವಾಗಿ ದೇಣಿಗೆಯನ್ನು ನೀಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ದೇವಾಲಯದ ನವೀಕೃತ ಭವ್ಯ ಕಟ್ಟಡದ ಭವ್ಯ ಉದ್ಘಾಟನಾ, ವಾಸ್ತುಶಾಂತಿ ಹಾಗೂ ಕಳಸಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಶ್ರೀ ಸಿದ್ಧೇಶ್ವರ ವ್ಯವಸ್ಥಾಪಕ ಮಂಡಳಿ ಕಣಬರ್ಗಿ ಹಾಗೂ ಶ್ರೀ ಸಿದ್ದೇಶ್ವರ ಭಕ್ತ ಮಂಡಳಿ ಕಣಬರ್ಗಿ ಮತ್ತು ಕಣಬರ್ಗಿ ಗ್ರಾಮದ ಭಕ್ತಾದಿಗಳ ವತಿಯಿಂದ ಸಮಾರಂಭಕ್ಕೆ ಸಂಬಂಧಿಸಿದಂತೆ ಈ ಕೆಳಗಿನ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಗಳು

ರವಿವಾರ ದಿ. 12ನೇ ಫೆಬ್ರವರಿ 2023 ರಂದು ಬೆಳಿಗ್ಗೆ 8.00 ಗಂಟೆಗೆ ಗ್ರಾಮದೇವಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಿಂದ ಶ್ರೀ ಸಿದ್ಧೇಶ್ವರ ದೇವಸ್ಥಾನದ ವರೆಗೆ ಗ್ರಾಮದ ಭಕ್ತಮಂಡಳಿಯ ವತಿಯಿಂದ ಶ್ರೀ ಸಿದ್ದೇಶ್ವರ ಕಳಸ ಮೇರವಣಿಗೆ ಹಾಗೂ
ಮುತ್ತೈದೆಯರಿಂದ ಕುಂಭಹೊತ್ತು ಮೆರವಣಿಗೆ ನಡೆಯಲಿದೆ.

ಸೋಮವಾರ ದಿ. 13ನೇ ಫೆಬ್ರವರಿ 2023 ರಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 12.00 ಗಂಟೆಯ ವರೆಗೆ ಸಿದ್ದೇಶ್ವರ ಮಂದಿರದಲ್ಲಿರುವ ಗಣೇಶ ದೇವಸ್ಥಾನದಲ್ಲಿ ಗಣಹೋಮವನ್ನು ಮತ್ತು ದೇವಸ್ಥಾನದ ಆವರಣದಲ್ಲಿ ರಾಷೋಘ್ನ ಹೋಮವನ್ನು ಸಂಜೆ 6.00 ಗಂಟೆ ಯಿಂದ 9.00 ಗಂಟೆ ಯವರಿಗೆ ಹಮ್ಮಿಕೊಳಲಾಗಿದೆ.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ