Breaking News

ಇನ್ಸ್ ಪೆಕ್ಟರ್ ದೇವೇಂದ್ರ ದುಬೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Spread the love

ಬೆಂಗಳೂರು: ತೆರಿಗೆ ಇಲಾಖೆಯ ಇನ್ಸ್ ಪೆಕ್ಟರ್ ದೇವೇಂದ್ರ ದುಬೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹತ್ತು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉತ್ತರಪ್ರದೇಶ ಮೂಲದ ದೇವೆಂದ್ರ ದುಬೆ ಹಲವು ವರ್ಷಗಳಿಂದ ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಪತ್ನಿ ಆರತಿ ಮಾಳವಿಯ ಜೊತೆ ಬೆಂಗಳೂರಿನಲ್ಲಿ ವಾಸವಾಗಿದ್ದರು. ಆದರೆ ಈಗ ದುಬೆ ಮೃತದೇಹ ಬಿಡಿಎ ಕಚೇರಿ ಬಳಿಯ ರೈಲ್ವೆ ಹಳಿ ಮೇಲೆ ಪತ್ತೆಯಾಗಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದೆ. ಇದು ಹಲವಿ ಅನುಮಾನಕ್ಕೆ ಕಾರಣವಾಗಿದೆ.

ದೇವೇಂದ್ರ ದುಬೆ ಸಾವಿಗೂ ಮುನ್ನ ಉತ್ತರಪ್ರದೇಶದಲ್ಲಿರುವ ತನ್ನ ತಂದೆ-ತಾಯಿ ಜೊತೆ ಫೋನ್ ನಲ್ಲಿ ಮಾತನಾಡಿದ್ದಾರೆ. ಬಳಿಕ ಪತ್ನಿಗೂ ಕರೆ ಮಾಡಿ ಸಂಜೆ ಮನೆಗೆ ಬರುವುದಾಗಿ ಹೇಳಿದ್ದಾರೆ. ಅದಾದ ಕೆಲ ಸಮಯದಲ್ಲಿ ಪತ್ನಿ ಆರತಿ ಮಾಳವಿ ಮೊಬೈಲ್ ಗೆ ವಾಟ್ಸಪ್ ಮೆಸೇಜ್ ಬಂದಿದೆ. ಅದನ್ನು ನೋಡಿದ ಪತ್ನಿ ಶಾಕ್ ಆಗಿದ್ದಾರೆ. ಪತ್ನಿಗೆ ಇನ್ಶುರೆನ್ಸ್ ಪಾಲಿಸಿ ಹಾಗೂ ಡೆತ್ ನೋಟ್ ವಾಟ್ಸಪ್ ಮೂಲಕ ಕಳುಹಿಸಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ