Breaking News

3 ವಿಮಾನ ನಿಲ್ದಾಣಗಳಿಗೆ ನಾಮಕರಣ ಏಕಕಾಲಕ್ಕೆ ನಿರ್ಧಾರ: ಸಿಎಂ

Spread the love

ಹುಬ್ಬಳ್ಳಿ: ‘ಶಿವಮೊಗ್ಗ, ಬೆಳಗಾವಿ ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ನಾಮಕರಣ ಕುರಿತು ಏಕಕಾಲದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.

ಯಡಿಯೂರಪ್ಪ ಅವರ ಹೆಸರಿಡುವ ಜನರ ಬೇಡಿಕೆಯಿತ್ತು. ಯಡಿಯೂರಪ್ಪ ನವರೇ ಮತ್ತೆ ಬೇಡ ಎಂದಿದ್ದಾರೆ. ಶೀಘ್ರದಲ್ಲಿಯೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.

‘ಕಾಂಗ್ರೆಸ್‌ನದ್ದು ಟಿಪ್ಪು ಸಂಸ್ಕೃತಿ, ಬಿಜೆಪಿಯದ್ದು ನಾಲ್ವಡಿ ಕೃಷ್ಣರಾಜ ಒಡೆಯರ್ ಸಂಸ್ಕೃತಿ’ ಎಂಬ ಬಿಜೆಪಿಯ ಸಿ.ಟಿ. ರವಿ ಹೇಳಿಕೆಗೆ ಪ್ರತಿ ಕ್ರಿಯಿಸಿದ ಅವರು, ‘ನನ್ನ ಪ್ರಕಾರ ನಮ್ಮದು ನರೇಂದ್ರ ಮೋದಿ ಸಂಸ್ಕೃತಿ. ಹಿಂದೆಂದೂ ಇಲ್ಲದಂತೆ ಭಾರತವನ್ನು‌ ಸಶಕ್ತವಾಗಿ, ಶ್ರೀಮಂತವಾಗಿ ಕಟ್ಟುವಲ್ಲಿ ಮೋದಿ ಶ್ರಮಿಸುತ್ತಿದ್ದಾರೆ’ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ