ಬೆಂಗಳೂರು : ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಇಂದು ಭೇಟಿ ಮಾಡಿದರು.
ಹಲವು ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು. ಬಳಿಕ ಮಳೆಗಾಲದಲ್ಲಿ ಅತಿವೃಷ್ಟಿಯಿಂದಾದ ಅನಾಹುತಗಳು, ಹಾನಿಯನ್ನು ತಡೆಗಟ್ಟಲು ವ್ಯವಸ್ಥಿತವಾಗಿ ಕಾರ್ಯತಂತ್ರ ರೂಪಿಸಿದ ಸಚಿವರ ಕಾರ್ಯಗಳನ್ನು ಶ್ಲಾಘಿಸಿದರು.