ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತವರ ಕುಟುಂಬದ ಸದಸ್ಯರ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಸಿಬಿಐ ತನಿಖೆಯನ್ನು ಪ್ರಶ್ನಿಸಿ ಡಿ.ಕೆ.
ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯು ನ್ಯಾ| ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿದ್ದು, ಪ್ರಕರಣದ ತನಿಖೆಗೆ ಫೆ.24ರವರೆಗೆ ತಡೆ ನೀಡಿತು.
ಅಲ್ಲದೆ, ಈವರೆಗಿನ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.