Breaking News

ಕಾಂಕ್ರೀಟ್ ಲಾರಿಯೊಂದು ಬೈಕ್ ಗೆ ರಭಸವಾಗಿ ಡಿಕ್ಕಿ ಸ್ಥಳದಲ್ಲಿಯೇಸಾವನ್ನಪ್ಪಿದ ಮಹಿಳೆ

Spread the love

ಕಾಂಕ್ರೀಟ್ ಲಾರಿಯೊಂದು ಬೈಕ್ ಗೆ ರಭಸವಾಗಿ ಡಿಕ್ಕಿ ಹೊಡೆದು ಮಹಿಳೆಯೋರ್ವಳ ಮೇಲೆ ಹರಿದು ಪರಿಣಾಮವಾಗಿ ಸ್ಥಳದಲ್ಲಿಯೇ ಭೀಕರವಾಗಿ ಸಾವನ್ನಪ್ಪಿದ ಘಟನೆ ನಗರದ ನೂರಾನಿ ಮಾರ್ಕೆಟ್ ಬಳಿ ಇಂದು ಸಂಭವಿಸಿದೆ.

ಮಹಿಳೆಯ ತಲೆಯ ಮೇಲೆ ಹರಿದು ಛಿದ್ರ ಛಿದ್ರವಾಗಿದ್ದು, ಮಹಿಳೆಯ ಹೆಸರು‌ ತಿಳಿದು ಬಂದಿಲ್ಲ. ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮಹಿಳೆಯ ಜೊತೆಗೆ ಇದ್ದ ವ್ಯಕ್ತಿಯೋರ್ವನಿಗೆ ಗಂಭೀರವಾಗಿದೆ.

ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ. ಈ ಕುರಿತು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ