ವಾಷಿಂಗ್ಟನ್: ಮಂಗಳ ಗ್ರಹದಲ್ಲಿದ್ದ ಸರೋವರದ ಅಲೆಗಳೇ ಕಲ್ಲುಗಳಾಗಿ ಮಾರ್ಪಾಡಾಗಿರುವ ಚಿತ್ರವನ್ನು ನಾಸಾದ ರೋವರ್ ಒಂದು ಸೆರೆ ಹಿಡಿದಿದೆ. ಈ ಮೂಲಕ ಶತಕೋಟಿ ವರ್ಷಗಳ ಹಿಂದೆ ಮಂಗಳ ಗ್ರಹದಲ್ಲಿ ನೀರಿತ್ತು ಎನ್ನುವ ವಾದಗಳಿಗೆ ಮತ್ತೊಂದು ಪುಷ್ಟಿ ಸಿಕ್ಕಿದಂತಾಗಿದೆ.
ಮಂಗಳನಲ್ಲಿ ಸಂಚರಿಸುತ್ತಿರುವ ನಾಸಾದ “ಕ್ಯೂರಿಯಾಸಿಟಿ ರೋವರ್’, “ಸಲ್ಫೆಟ್-ಬಿಯರಿಂಗ್ ಯೂನಿಟ್’ ಎನ್ನುವ ಪ್ರದೇಶದಲ್ಲಿ ಸಂಚರಿಸುತ್ತಿರುವ ವೇಳೆ ಕೆಲವು ಚಿತ್ರಗಳನ್ನು ಸೆರೆ ಹಿಡಿದೆ. ಇದು ಪರ್ವತ ಸಾಲಿನಲ್ಲಿರುವ ಪ್ರದೇಶವಾಗಿದ್ದು,ಚಿತ್ರಗಳು ಆ ಪ್ರದೇಶದಲ್ಲಿ ಪುರಾತನ ಸರೋವರವಿತ್ತು ಎನ್ನುವುದಕ್ಕೆ ಪುರಾವೆ ಒದಗಿಸಿವೆ. ತೀರಾ ಆಳವಿಲ್ಲದ ಸಮುದ್ರ ಕಾಲಾಂತರದಲ್ಲಿ ಒಣಗಿ ಹೋಗಿದ್ದು, ಬಳಿಕ ಅಲೆಗಳೇ ಬಂಡೆಗಳಾಗಿ ಮಾರ್ಪಾಡಾಗಿವೆ ಎಂದು ನಾಸಾ ಹೇಳಿದೆ.