ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಯ ಬಸ್‌ನಲ್ಲಿ ಎಷ್ಟು ಜನ ಪ್ರಯಾಣಿಸುತ್ತಾರೋ ಅಷ್ಟೇ ಸೀಟು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಿಗಲಿದೆ ಎಂದು ಸಚಿವ ಡಾ| ಅಶ್ವತ್ಥ ನಾರಾಯಣ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರಲಿದೆ.
ಇಡೀ ದೇಶದಲ್ಲೇ ಕಾಂಗ್ರೆಸ್ ಮುಕ್ತವಾಗಿದೆ. ಎಲ್ಲ ರಾಜ್ಯಗಳೂ ಕಾಂಗ್ರೆಸ್ ಮುಕ್ತವಾಗುತ್ತಿದೆ. ನಮ್ಮ ರಾಜ್ಯವೂ ಈ ಚುನಾವಣೆಯಲ್ಲಿ ಕಾಂಗ್ರೆಸ್ ಮುಕ್ತವಾಗಲಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಡಿ.ಕೆ. ಶಿವಕುಮಾರ್ ಸಹಿತ ಹಲವರು ಕನಸು ಕಾಣುತ್ತಿದ್ದಾರೆ.