ನಾಸಿಕ್: ಏಕನಾಥ್ ಶಿಂಧೆ-ಬಿಜೆಪಿ ಸರಕಾರವು ನ್ಯಾಯಸಮ್ಮತವಾಗಿದೆ ಮತ್ತು ಅಧಿಕಾರದಲ್ಲಿ ಮುಂದುವರಿಯುತ್ತದೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ಹೇಳಿದ್ದಾರೆ.
ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ಅದರ ಪತನದ ಬಗ್ಗೆ ಭವಿಷ್ಯ ನುಡಿದ ಬೆನ್ನಲ್ಲೇ, ಜೂನ್ 2022 ರಲ್ಲಿ ಅಧಿಕಾರಕ್ಕೆ ಬಂದ ಸರಕಾರವು ಸಂವಿಧಾನದ ನಿಯಮಗಳ ಪ್ರಕಾರ ರಚನೆಯಾಗಿದೆ ಎಂದು ಫಡ್ನವೀಸ್ ಹೇಳಿದ್ದಾರೆ.
ನಾಸಿಕ್ ನಗರದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿಯನ್ನುದ್ದೇಶಿಸಿ ಮಾತನಾಡಿದ ಫಡ್ನವೀಸ್, ಏಕನಾಥ್‌ಅ ಶಿಂಧೆ ಅವರ ಬಣದ 16 ಶಾಸಕರ ವಿರುದ್ಧ ಶಿವಸೇನೆ (ಯುಬಿಟಿ) ಬಣ ಸಲ್ಲಿಸಿರುವ ಅನರ್ಹತೆ ಅರ್ಜಿಯನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ನಮ್ಮ ಪರವಾಗಿ ತೀರ್ಪು ನೀಡುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.