ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ರಣತಂತ್ರಗಳನ್ನು ರೂಪಿಸಿರುವ ಬಿಜೆಪಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಿ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ.
ಬಿಜೆಪಿಯ ಶಿವಮೊಗ್ಗ, ಮಂಗಳೂರು ವಿಭಾಗಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಿ, ನಾಯಕರಿಗೆ ಚುನಾವಣೆ ಸಂಬಂಧಿಸಿ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸೇರಿ ಪ್ರಮುಖ ನಾಯಕರು ಉಪಸ್ಥಿತರಿದ್ದರು.
‘ಅಮಿತ್ ಶಾ ಅವರು ಎರಡು ವಿಭಾಗಗಳ ಆರು ಜಿಲ್ಲೆಗಳ 33 ಕ್ಷೇತ್ರಗಳನ್ನು ಗೆಲ್ಲುವ ಸೂತ್ರ ಸೂಚ್ಯವಾಗಿ ನೀಡಿದ್ದಾರೆ. ಸಿದ್ದತೆ ಆರಂಭಿಸಲು ಹೇಳಿದ್ದಾರೆ’ ಎಂದು ಸಭೆಯ ನಂತರ ಸಚಿವ ಸುನಿಲ್ ಕುಮಾರ್ ಹೇಳಿದರು.