Breaking News

ಇಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ : ನಾಳೆ ಬೆಂಗಳೂರಿನಲ್ಲಿ `ಏರೋ ಇಂಡಿಯಾ-2023′ ಉದ್ಘಾಟನೆ

Spread the love

ಬೆಂಗಳೂರು : ಫೆಬ್ರವರಿ 13 ರ ನಾಳೆಯಿಂದ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ಏರ್​ಶೋ ವೈಮಾನಿಕ ಪ್ರದರ್ಶನ ನಡೆಯಲಿದೆ. ಹೀಗಾಗಿ ನಗರದ ಹಲವು ರಸ್ತೆಗಳಲ್ಲಿ ಕೆಲವೊಂದು ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಬೆಂಗಳೂರು ನಗರದ ಯಲಹಂಕ ವಾಯುಸೇನಾ ನೆಲೆಯಲ್ಲ ದಿ:13-02-2023 ರಿಂದ 17-02-2023 ರವರೆಗೆ ಪ್ರತಿಷ್ಠಿತ ಏರೋ ಇಂಡಿಯಾ-2023 ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ದಿ:13- 02-2023 ರ ಬೆಳಗ್ಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿಗಳು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಗಣ್ಯಾತಿಗಣ್ಯ ವ್ಯಕ್ತಿಗಳು, ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ತುರ್ತು ಸೇವಾ ವಾಹನಗಳ ಸುಗಮ ಸಂಚಾರಕ್ಕಾಗಿ ಹಾಗೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುವ ವಾಹನಗಳ ಸುಗಮ ಸಂಚಾರದ ಹಿತದೃಷ್ಠಿಯಿಂದ ದಿ:13- 02-2023 ರಂದು ಬೆಳಗ್ಗೆ 6-00 ಗಂಟೆಯಿಂದ 8-00 ಗಂಟೆಯವರೆಗೆ ಕಾರ್ಯಕ್ರಮದ ದಿವಸಗಳಂದು ಸಂಬಂಧಿಸಿದ ಈ ಕೆಳಕಂಡ ರಸ್ತೆಗಳಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ರಸ್ತೆ ಬದಿಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸುವುದು ಮತ್ತು ಏಕಮುಖ ಸಂಚಾರ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಜಾರಿಗೆ ತರಲಾಗಿದೆ.

ಸಂಚಾರ ನಿರ್ಬಂಧ ಹಾಗೂ ಕಲ್ಪಿಸಿರುವ ಪರ್ಯಾಯ ಮಾರ್ಗಗಳು:

Dailyhunt

Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ