Breaking News

ಮೈತ್ರಿ ಸುಳಿವು ನೀಡಿದ ಗಾಲಿ ಜನಾರ್ದನ ರೆಡ್ಡಿ

Spread the love

ರಾಮದುರ್ಗ (ಬೆಳಗಾವಿ ಜಿಲ್ಲೆ): ‘ಚುನಾವಣೆ ಬಳಿಕ ರಾಜ್ಯದಲ್ಲಿ ಅಧಿಕಾರಕ್ಕೇರುತ್ತೇನೆ. ಇಲ್ಲದಿದ್ದರೆ ಅಧಿಕಾರಕ್ಕೆ ಬರುವವರ ಕೈ ಹಿಡಿದಾದರೂ ಅಧಿಕಾರ ಮಾಡುತ್ತೇನೆ’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಶನಿವಾರ ಹೇಳಿದರು.

 

ಇಲ್ಲಿ ರೆಡ್ಡಿ ಸಮಾಜ ಹಮ್ಮಿಕೊಂಡಿದ್ದ ವೇಮನರ 611ನೇ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿದ ಅವರು, ‘ನನ್ನ ಕೈ ಯಾರು ಹಿಡಿಯುತ್ತಾರೆ, ನಾನು ಯಾರ ಕೈಹಿಡಿಯುತ್ತೇನೆ ಎನ್ನುವುದು ಚುನಾವಣೆ ಬಳಿಕ ಗೊತ್ತಾಗಲಿದೆ’ ಎನ್ನುವ ಮೂಲಕ ಮೈತ್ರಿಯ ಸುಳಿವು ನೀಡಿದರು. ನೀಡಿದ್ದಾರೆ.

‘ಕಲ್ಯಾಣ ಕರ್ನಾಟಕದ 13 ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ರೆಡ್ಡಿ ಜನಾಂಗವಿದೆ. ಅಧಿಕಾರ ಹಿಡಿಯುವ ಸಾಮರ್ಥ್ಯ ಹೊಂದಿದೆ. ಅದಕ್ಕಾಗಿ ಸಮಾಜದ ಸಂಘಟನೆ ನಡೆಯುತ್ತಿದೆ’ ಎಂದು ಹೇಳಿದರು. ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ