ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಕುಟುಂಬದಲ್ಲಿ ಒಡಕಿಲ್ಲ. ಶಾಸಕಾಂಗ ಪಕ್ಷದ ನಾಯಕ
ಎಚ್.ಡಿ. ಕುಮಾರಸ್ವಾಮಿ ಅವರು ಸೂಚಿಸುವ ಕ್ಷೇತ್ರದಿಂದಲೇ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ’ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಗೊಂಡನಹಳ್ಳಿಯಲ್ಲಿ ಶನಿವಾರ ನಡೆದ ಹಳ್ಳಿಕಾರ ಮಠ ಸಮರ್ಪಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಭವಾನಿ ರೇವಣ್ಣ ಅವರ ಸ್ಪರ್ಧೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೇವಲ ಭವಾನಿ ಅಷ್ಟೇ ಏಕೆ ಪಕ್ಷದ ಎಲ್ಲರೂ ಕುಮಾರಸ್ವಾಮಿ ಅವರ ಸೂಚಿಸಿದ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.
ಕುಟುಂಬ ರಾಜಕಾರಣ ಕುರಿತ ಪ್ರಶ್ನೆಗೆ, ‘ನಾಳೆಯೇ ನಾನು ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ರಾಜೀನಾಮೆ ಕೊಡಿಸುತ್ತೇನೆ. ರಾಷ್ಟ್ರೀಯ ಪಕ್ಷಗಳ ರಾಜಕಾರಣಿಗಳು ತಮ್ಮ ಕುಟುಂಬದವರಿಗೆ ಟಿಕೆಟ್ ನೀಡುವುದನ್ನು ನಿಲ್ಲಿಸುತ್ತಾರಾ? ಎಂದು ಸವಾಲೆಸೆದರು.
Laxmi News 24×7