Breaking News

ಮಡಿವಾಳೇಶ್ವರ ಕಲ್ಮಠ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ

Spread the love

ಧಾರವಾಡ: ತಾಲ್ಲೂಕಿನ ಐತಿ ಹಾಸಿಕ ಗರಗ ಮಡಿವಾಳೇಶ್ವರ ಕಲ್ಮಠದ ಪೀಠಾ ಧಿಪತಿ ಚನ್ನಬಸವ ಸ್ವಾಮೀಜಿ (88) ಅವರು ಭಾನುವಾರ ಲಿಂಗೈಕ್ಯರಾದರು. ಇವರು ವಯೋಸಹಜ ಕಾಯಿಲೆ ಬಳಲುತ್ತಿದ್ದರು.

ಹಲವು ವರ್ಷಗಳಿಂದ ಕಲ್ಮಠದ ಜವಾಬ್ದಾರಿ ಹೊತ್ತಿದ್ದ ಸ್ವಾಮೀಜಿ, ಮಠದ ಏಳಿಗೆಗಾಗಿ ಶ್ರಮಿಸಿದ್ದರು.

ಅನ್ನದಾನ, ವಿದ್ಯಾದಾನಕ್ಕೆ ಹೆಚ್ಚಿನ ಒತ್ತು ನೀಡಿದ್ದ ಅವರು, ಸಮಾಜ ಸೇವೆ ಯಲ್ಲಿಯೂ ತೊಡಗಿಸಿಕೊಂಡಿದ್ದರು.

ಮಠದ ಆವರಣದಲ್ಲಿ ಮಧ್ಯಾಹ್ನ 12.30ರಿಂದ ಸೋಮವಾರ ಬೆಳಿಗ್ಗೆ 7.30ರವರೆಗೆ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಮಧ್ಯಾಹ್ನ 12.30ಕ್ಕೆ ಮಠದ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ