ಬೆಳಗಾವಿ: 50 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸುಳೇಬಾವಿ ಗ್ರಾಮದ ಬಳಿ ನಡೆದಿದೆ.
ಫುಲ್ ಶರ್ಟ್, ನೀಲಿ ಜಾಕೆಟ್ ಧರಿಸಿರುವ ವ್ಯಕ್ತಿ ಸುಳೇಬಾವಿ ಮತ್ತು ಸಲದಾಳ ರೈಲು ನಿಲ್ದಾಣದ ಮಧ್ಯೆ ರೈಲು ಹಳಿಗಳ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಕೆಂಪು ಬಣ್ಣದ ಛತ್ರಿ, ನೀಲಿ ಚೀಲ ದೊರೆತಿದೆ ಎಂದು ಬೆಳಗಾವಿ ನಗರದ ರೈಲ್ವೆ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
Laxmi News 24×7