ಹೊಸದಿಲ್ಲಿ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಘೋರ ದುರಂತದಲ್ಲಿ ಮಡಿದ ವೀರ ಯೋಧರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೆನೆದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಪುಲ್ವಾಮಾದಲ್ಲಿ ಈ ದಿನ ನಾವು ಕಳೆದುಕೊಂಡ ನಮ್ಮ ಪರಾಕ್ರಮಿಗಳನ್ನು ನೆನಪಿಸಿಕೊಳ್ಳುತ್ತೇನೆ.
ಅವರ ಅತ್ಯುನ್ನತ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಧೈರ್ಯವು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತದೆ’ ಎಂದಿದ್ದಾರೆ.
2019ರ ಫೆಬ್ರವರಿ 14ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರ ದಾಳಿ ನಡೆಸಲಾಗಿತ್ತು. ಜಮ್ಮುವಿನಿಂದ ಶ್ರೀನಗರಕ್ಕೆ 2,500 ಕ್ಕೂ ಹೆಚ್ಚು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಸಿಬ್ಬಂದಿಗಳು ಸಾಗುತ್ತಿದ್ದ 78 ವಾಹನಗಳನ್ನು ಗುರಿಯಾಗಿಸಿದ ಭಯೋತ್ಪಾದಕರು ದಾಳಿ ನಡೆಸಿದ್ದರು. ಘಟನೆಯಲ್ಲಿ 40 ಭಾರತೀಯ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಹುತಾತ್ಮರಾಗಿದ್ದರು.