ನವದೆಹಲಿ: ಲೋಕಸಭೆಯ ಕಲಾಪನ್ನು ಸೋಮವಾರ ಒಂದು ತಿಂಗಳ ಅವಧಿಗೆ ಮುಂದೂಡಲಾಗಿದ್ದು, ಮಾರ್ಚ್ 13 ರಂದು ಮತ್ತೆ ಸಭೆ ಸೇರಲಿದೆ.
ಬಜೆಟ್ ಅಧಿವೇಶನದ ಮೊದಲ ಭಾಗ ಜನವರಿ 31 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಪ್ರಾರಂಭವಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು ‘ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ’ದ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದರು.
ಅಧಿವೇಶನದ ಮೊದಲ ಭಾಗದಲ್ಲಿ ಕೇಂದ್ರ ಬಜೆಟ್ ಮೇಲಿನ ಸಾಮಾನ್ಯ ಚರ್ಚೆಗೂ ನಿರ್ಮಲಾ ಸೀತಾರಾಮನ್ ಉತ್ತರಿಸಿದ್ದರು.