Breaking News

BBC ಕಚೇರಿ ಮೇಲೆ IT ಅಧಿಕಾರಿಗಳ ದಿಢೀರ್ ದಾಳಿ

Spread the love

ಬೆಂಗಳೂರು: ಬ್ರಿಟಿಷ್ ಬ್ರಾಡ್ ಕಾಸ್ಟಿಂಗ್ ಸರ್ವಿಸ್-BBC ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದೆಹಲಿ, ಮುಂಬೈ ಕಚೇರಿಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಿಬಿಸಿ ಕಚೇರಿಯಲ್ಲಿನ ಸಿಬ್ಬಂದಿಗಳ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.

ಅಂತರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆ ಅಕ್ರಮಗಳ ಆರೋಪದ ಮೇಲೆ ತೆರಿಗೆ ಇಲಾಖೆ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ತಪಾಸಣೆ ಅವಧಿಯಲ್ಲಿ ಬಿಬಿಸಿ ಕಚೇರಿ, ಸ್ಟುಡಿಯೋಗಳನ್ನು ಮುಚ್ಚಲಾಗುತ್ತಿದ್ದು, ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳದಂತೆ ಸೂಚಿಸಲಾಗಿದೆ.

ಇತ್ತೀಚೆಗೆ ಬಿಬಿಸಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಇಂದಿಯಾ; ದಿ ಮೋದಿ ಕ್ವೆಶ್ಚನ್ ಎಂಬ ಡಾಕ್ಯುಮೆಂಟರಿ ನಿರ್ಮಿಸಿ ಪ್ರಸಾರ ಮಾಡಿತ್ತು. 2002ರ ಗುಜರಾತ್ ಗಲಭೆಯಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ಮೋದಿ ಪಾತ್ರ ಇದೆ ಎಂಬಂತೆ ಬಿಂಬಿಸಲಾಗಿತ್ತು. ಡಾಕ್ಯುಮೆಂಟರಿಯ ಲಿಂಕ್ ಗಳನ್ನು ಕೇಂದ್ರ ಸರ್ಕಾರ ಸಾಮಾಜಿಕ ಜಾಲತಾಣಗಳಿಂದ ತೆಗೆಸಿತ್ತು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಇದೀಗ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿದೆ


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ