Breaking News

ಅಸಮರ್ಪಕ ಸಮವಸ್ತ್ರ, ಶೂ ವಿತರಣೆಗೆ ಹೈಕೋರ್ಟ್‌ ತರಾಟೆ

Spread the love

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಮವಸ್ತ್ರ ಮತ್ತು ಶೂ ವಿತರಿಸಿರುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ಮಾಹಿತಿ ನೀಡದ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌, ಹಿರಿಯ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ಎಲ್ಲ ಸರಿಹೋಗುತ್ತದೆ ಎಂದು ಎಚ್ಚರಿಕೆ ನೀಡಿದೆ.

 

ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲು ಚೀಲ ನೀಡಬೇಕು ಎಂದು 2019ರ ಆ.28ರಂದು ಹೈಕೋರ್ಟ್‌ ಹೊರಡಿಸಿರುವ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಕೊಪ್ಪಳ ಜಿಲ್ಲೆ ಯ ಮಾಸ್ಟರ್‌ ಮಂಜುನಾಥ್‌ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾ. ಕೆ.ಎಸ್‌. ಹೇಮಲೇಖ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.


Spread the love

About Laxminews 24x7

Check Also

ಕೈದಿಗಳಿಗೆ ರಾಜಾತಿಥ್ಯ ಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ: B.J.P.

Spread the love ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಆತಿಥ್ಯ ಖಂಡಿಸಿ ಇಂದು ಸಿಎಂ ಮನೆಗೆ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ