Breaking News

ತುಮಕೂರಲ್ಲಿ ಕಂಗನಾ ವಿರುದ್ಧ ಎಫ್‍ಐಆರ್

Spread the love

ತುಮಕೂರು: ಕೋರ್ಟ್ ಆದೇಶದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಮೇಲೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದೆ.

ಕಂಗನಾ ಅವರು ಟ್ವಿಟರ್ ನಲ್ಲಿ ರೈತರನ್ನ ಭಯೋತ್ಪಾದಕರು ಎಂದು ನಿಂದಿಸಿದ್ದಾರೆ ಎಂದು ಆರೋಪಿಸಿ ವಕೀಲ ರಮೇಶ್ ನಾಯ್ಕ್, ಜೆಎಂಎಫ್‍ಸಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಕೋರ್ಟ್ ನಿರ್ದೇಶನ ಮೇರೆಗೆ ನಟಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಕೇಂದ್ರ ಸರ್ಕಾರ ಜಾರಿ ತಂದಿದ್ದ ಕೃಷಿ ತಿದ್ದುಪಡಿ ಮಸೂದೆ ವಿರೋಧಿಸಿ ರೈತರು ದೇಶಾದ್ಯಂತ ಪ್ರತಿಭಟನೆ ನಡೆಸಿದ್ದರು. ಹಲವು ರೈತ ಸಂಘಟನೆಗಳು ರಾಷ್ಟ್ರವ್ಯಾಪಿ ಬಂದ್‍ಗೆ ಕರೆ ನೀಡಿದ್ದರು. ಅಲ್ಲದೆ ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಂಡಿತ್ತು. ಈ ಪ್ರತಿಭಟನೆ ಕುರಿತು ಕಂಗನಾ ರಣಾವತ್ ಟ್ವೀಟ್ ಮಾಡಿ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದರು. ಈ ಟ್ವೀಟ್ ಭಾರೀ ವಿವಾದ ಹುಟ್ಟಿಸಿತ್ತು.

ಈ ಸಂಬಂಧ ಹೈಕೋರ್ಟ್ ವಕೀಲ ರಮೇಶ್ ನಾಯಕ್ ಖಾಸಗಿ ದೂರು ದಾಖಲಿಸಿದ್ದು, ಸಂಸತ್ತಿನಲ್ಲಿ ಕೃಷಿ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ. ಇದನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರನ್ನು ಭಯೋತ್ಪಾದಕರು ಎಂದು ಕಂಗನಾ ಟ್ವಿಟ್ಟರ್ ನಲ್ಲಿ ಅಪಮಾನಿಸಿದ್ದಾರೆ. ಇದರಿಂದ ಲಕ್ಷಾಂತರ ರೈತರಿಗೆ ಅಪಮಾನ ಮಾಡಿದ್ದಾರೆ ಎಂದು ನ್ಯಾಯಾಲಯದಲ್ಲಿ ಪಿಸಿಆರ್ ಕ್ರಿಮಿನಲ್ ದೂರನ್ನು ದಾಖಲಿಸಿದ್ದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ