Breaking News

ಬೆಳಗಾವಿ ಶೈಕ್ಷಣಿಕ ಜಿಲ್ಲಾಮಟ್ಟದ ‘ಮಕ್ಕಳ ಕಲಿಕಾ ಹಬ್ಬ’ದಲ್ಲಿ ಗಮನಸೆಳೆದ ಚಟುವಟಿಕೆಗಳು

Spread the love

ಬೆಳಗಾವಿ: ತಾಲ್ಲೂಕಿನ ಮಾಸ್ತಮರ್ಡಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿರುವ ಬೆಳಗಾವಿ ಶೈಕ್ಷಣಿಕ ಜಿಲ್ಲಾಮಟ್ಟದ ‘ಮಕ್ಕಳ ಕಲಿಕಾ ಹಬ್ಬ’ದಲ್ಲಿ ಎರಡನೇ ದಿನವಾದ ಮಂಗಳವಾರ ನಡೆದ ವಿವಿಧ ಶೈಕ್ಷಣಿಕ ಚಟುವಟಿಕೆ ಗಮನಸೆಳೆದವು.

 

ಮಾಡು-ಆಡು, ಹಾಡು-ಆಡು, ಕಾಗದ-ಕತ್ತರಿ ಮತ್ತು ಊರು ತಿಳಿಯೋಣ ವಿಭಾಗದಲ್ಲಿ ನಡೆದ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ವಿಜ್ಞಾನಕ್ಕೆ ಸಂಬಂಧಿಸಿದ ಸರಳ ಪ್ರಯೋಗಗಳನ್ನು ಮಾಡಿದರು. ಗಾಯನ ಮತ್ತಿತರ ಕಲಾಪ್ರಕಾರ ಪ್ರಸ್ತುತಪಡಿಸಿದರು. ಸ್ಥಳೀಯ ಮಟ್ಟದಲ್ಲಿ ಲಭ್ಯವಾಗುವ ಕಚ್ಚಾ ವಸ್ತುಗಳಿಂದ ವಿವಿಧ ಮಾದರಿಗಳನ್ನು ತಯಾರಿಸಿದರು. ಜತೆಗೆ, ಊರಲ್ಲಿ ಸಂಚರಿಸಿ ಗ್ರಾಮಸ್ಥರ ಬದುಕಿನ ಶೈಲಿ ಬಗ್ಗೆ ಮಾಹಿತಿ ಸಂಗ್ರಹಿಸಿದರು.

ಅಗಸ್ತ್ಯ ಫೌಂಡೇಷನ್‌ ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಿತ್ತು. ಅಗ್ನಿಶಾಮಕ ದಳದವರು ತುರ್ತು ರಕ್ಷಣಾ ಕಾರ್ಯಾಚರಣೆಯ ಪ್ರಾತ್ಯಕ್ಷಿಕೆ ಪ್ರಸ್ತುತಪಡಿಸಿದರು.

ಬೆಳಗಾವಿ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಎಂ.ಸಿಂಧೂರ, ಮಕ್ಕಳ ಕಲಿಕಾ ಹಬ್ಬದ ನೋಡಲ್‌ ಅಧಿಕಾರಿ ಬಸವರಾಜ ಮಿಲ್ಲಾನಟ್ಟಿ, ಶಿಕ್ಷಣಾಧಿಕಾರಿ ಲೀಲಾವತಿ ಹಿರೇಮಠ, ಸಲೀಮ್‌ ನದಾಫ್‌ ಇದ್ದರು.


Spread the love

About Laxminews 24x7

Check Also

2025 – 26 ಹಂಗಾಮಿನಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ಸರ್ಕಾರದಿಂದ ಅಧಿಕೃತ ಆದೇಶ

Spread the love ಬೆಂಗಳೂರು: 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ