Breaking News

ಬಾದಾಮಿಯಿಂದಲೇ ಕಣಕ್ಕಿಳಿಯುವಂತೆ ಸಿದ್ದರಾಮಯ್ಯಗೆ ಒತ್ತಾಯ

Spread the love

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವ ರನ್ನು ಮಂಗಳವಾರ ಭೇಟಿ ಮಾಡಿದ ಬಾದಾಮಿಯ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಮುಂಬರುವ ವಿಧಾನಸಭೆ ಚುನಾವಣೆ ಯಲ್ಲಿ ತಮ್ಮ ಕ್ಷೇತ್ರದಿಂದಲೇ ಕಣಕ್ಕಿಳಿಯುವಂತೆ ಒತ್ತಾಯಿಸಿದರು.

 

ಸಿದ್ದರಾಮಯ್ಯ ಅವರ ನಿವಾಸಕ್ಕೆ ಬಂದ ಮುಖಂಡರು, ಕಾರ್ಯಕರ್ತರು, ಅವರು ಮನೆಯಿಂದ ಹೊರಬರುವುದಕ್ಕಾಗಿ ಸುಮಾರು 2 ಗಂಟೆ ಕಾದರು. ಅವರು ಮನೆಯಿಂದ ಹೊರಡುತ್ತಿದ್ದಂತೆ ಮುತ್ತಿಗೆ ಹಾಕಿ ಒತ್ತಡ ಹೇರುವ ಪ್ರಯತ್ನ ಮಾಡಿದರು. ಅಲ್ಲದೆ, ಮಾತನಾಡಿಸಲು ಮುಂದಾದರು. ಆದರೆ, ಅವರು ಮಾತು ಕತೆಗೆ ನಿಲ್ಲದೆ ಕಾರು ಏರಿ ಹೊರಟಾಗ ಕೆಲಹೊತ್ತು ಧರಣಿ ಕುಳಿತರು.

‘ಬಾದಾಮಿ ಕ್ಷೇತ್ರಕ್ಕೆ ಬಾರದೇ ಇದ್ದರೆ ಸಾಮೂಹಿಕ ರಾಜೀನಾಮೆ ನೀಡುತ್ತೇವೆ’ ಎಂದು ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಸದಸ್ಯರು ಎಚ್ಚರಿಕೆಯ ಪತ್ರವನ್ನು ಸಿದ್ದರಾಮಯ್ಯ ಅವರಿಗೆ ನೀಡಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ