Breaking News

B,S,Y,ಗೆ ಅರಳುಮರಳು ಎಂದ ಸಿದ್ದರಾಮಯ್ಯ,ಕಾಂಗ್ರೆಸ್ಸಿಗರು ತಲೆ ತಿರುಕರು ಎಂದ B,S,Y,

Spread the love

ಬೆಂಗಳೂರು: ಸರ್ಕಾರದ ಟೆಂಡರ್ ಪ್ರಕ್ರಿಯೆಯಲ್ಲಿ ಗೋಲ್ ಮಾಲ್ ಎಂಬ ಕಾಂಗ್ರೆಸ್ ಆರೋಪಕ್ಕೆ, ಕಿಡಿಕಾರಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಕಾಂಗ್ರೆಸ್ ನಾಯಕರು ತಲೆ ತಿರುಕರು, ಅವರು ಇಲ್ಲಸಲ್ಲದ ಅರೋಪ ಮಾಡುತ್ತಿದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಟೆಂಡರ್ ರದ್ದುಗೊಳಿಸುವುದಾಗಿ ಡಿ.ಕೆ.ಶಿವಕುಮಾರ್ ಹಾಗು ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ. ಅದಕ್ಕೆ ಹುಚ್ಚುಚ್ಚಾಗಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ತಲೆ ಸರಿ ಇಲ್ಲದವರು ಮಾತ್ರ ಇಂತಹ ಹೇಳಿಕೆ ಕೊಡಲು ಸಾಧ್ಯ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಆರೋಪಗಳಿಗೆ ಸದನದಲ್ಲಿಯೇ ಉತ್ತರ ನೀಡುತ್ತೇವೆ ಎಂದ ಯಡಿಯೂರಪ್ಪ, ಅಧಿವೇಶನದಲ್ಲೇ ನಾನು ಇರಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ವಿಪಕ್ಷ ನಾಯಕರಾಗಿ ಈ ರೀತಿ ಹೇಳಿಕೆ ಗೌರವ ತರುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು ತಲೆ ತಿರುಕರು ಎಂಬ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ಕೆಮ್ದ ಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಡಿಯೂರಪ್ಪನವರಿಗೆ ವಯಸ್ಸಾಗಿದೆ. ವಯಸ್ಸಿನ ಕಾರಣ ಅವರು ಅರುಳುಮರುಳಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಿವಿಧ ಇಲಾಖೆಯ ಟೆಂಡರ್ ನಲ್ಲಿ ಗೋಲ್ ಮಾಲ್ ನಡೆಯುತ್ತಿದೆ. ಹಣ ತೆಗೆದುಕೊಳ್ಳುವುದನ್ನು ಯಡಿಯೂರಪ್ಪನವರಿಗೆ ಫೋಟೋ ತೆಗೆದು ತೋರಿಸಬೇಕಾ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಪತ್ರ ಬರೆದು ಹೇಳಿದ್ದಾರೆ. ಸರ್ಕಾರದ ಶಾಸಕರೇ ಟೆಂಡರ್ ನಲ್ಲಿ ಭ್ರಷ್ಟಾಚಾರ ನಡೆಸಲಾಗುತ್ತಿದೆ ಎನ್ನುತ್ತಿದ್ದಾರೆ. ನೀರಾವರಿ ಯೋಜನೆ ಟೆಂಡರ್ ನಲ್ಲಿ ಅಕ್ರಮ ನಡೆದಿದೆ. ತಾರಾತುರಿ ಟೆಂಡರ್ ಕರೆದು ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಅಧಿಕಾರಿಗಳು, ಗುತ್ತಿಗೆದಾರರು, ಶಾಸಕರು ಯಾರನ್ನೂ ಸರ್ಕಾರ ಬಿಟ್ಟಿಲ್ಲ, ಮೊದಲು ಟೆಂಡರ್ ಪ್ರಕ್ರಿಯೆ ರದ್ದುಗೊಳಿಸಲಿ ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ