Home / Uncategorized / ಮಳೆರಾಯ ರುದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ.

ಮಳೆರಾಯ ರುದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ.

Spread the love

ಬೆಂಗಳೂರು: ಕೊರೊನಾ ಮಧ್ಯೆ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಅಲ್ಲದೇ ಸಾಕಷ್ಟು ಅವಾಂತರ ಸೃಷ್ಟಿಸಿದ್ದಾನೆ. ಮಳೆರಾಯ ರುದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಮಹಾ ಮಳೆ ಮುಂದುವರಿದಿದ್ದು, ಇದು ಇಲ್ಲಿಗೆ ನಿಲ್ಲೋ ಲಕ್ಷಣಗಳು ಕಾಣುತ್ತಿಲ್ಲ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯದ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಜನ ತತ್ತರಿಸಿ ಹೋಗಿದ್ದಾರೆ.ಕೊರೊನಾದಿಂದ ಈಗಾಗಲೇ ಜನ ಇನ್ನಿಲ್ಲದ ಕಷ್ಟ ಅನುಭವಿಸುತ್ತಿದ್ದಾರೆ.

ಈ ಮಧ್ಯೆ ವರುಣನ ಅವಾಂತರಕ್ಕೆ ಜನರು ಕಂಗಾಲಾಗಿ ಹೋಗಿದ್ದಾರೆ. ರಣಮಳೆಯಿಂದಾದ ಅವಾಂತರ ಒಂದೊಂದಲ್ಲ. ನೂರಾರು ಎಕರೆ ಜಮೀನು ನೀರುಪಾಲಾಗಿದ್ದು, ಒಂದೊತ್ತು ತಿನ್ನೋಕು, ವಾಸ ಸ್ಥಳಕ್ಕೂ ಪರದಾಡುವಂತಾಗಿದೆ. ಕೊಪ್ಪಳದ ಕುಷ್ಟಗಿಯ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಬೈಕ್ ಸವಾರರನ್ನು ರಕ್ಷಣೆ ಮಾಡಲಾಗಿದೆ. ಮುದೇನೂರ ಗ್ರಾಮದ ಬನ್ನಟ್ಟಿ ಸೇತುವೆ ಕೊಚ್ಚಿ ಹೋಗಿದ್ದು, 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ವಿಜಯಪುರದ ಸಾತಿಹಾಳದಲ್ಲಿಯೂ ಜಲಾವೃತವಾದ ಸೇತುವೆ ದಾಟುವ ವೇಳೆ ಬೈಕ್ ಸಮೇತ ಇಬ್ಬರು ಕೊಚ್ಚಿ ಹೋಗಿದ್ದರು. ಕೂಡಲೇ ಕಷ್ಟ ಪಟ್ಟು ದಡ ಸೇರಿದ್ದಾರೆ. ಜೊತೆ ಬೈಕನ್ನು ನೀರಿಂದ ಎಳೆದು ತಂದಿದ್ದಾರೆ.

ರಾಜ್ಯದ ಬಹುತೇಕ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ತಿಕೋಟದ ಸಂಗಮನಾಥ ದೇವಾಲಯ ಸಂಪೂರ್ಣ ಜಲಾವೃತಗೊಂಡಿದೆ. ತುಂಬಿದ ನೀರಲ್ಲೇ ಅರ್ಚಕರು ಪೂಜೆ ನೆರವೇರಿಸಿದ್ದಾರೆ. ಯಾದಗಿರಿಯಲ್ಲಿ ಪ್ರವಾಹ ಭೀತಿ ಎದುರಾಗಿದ್ದು ಭೀಮಾ ನದಿಯಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಭೀಮಾ ತೀರದ ವೀರಾಂಜನೇಯ, ಕಂಗಳೇಶ್ವರ ದೇವಸ್ಥಾನ ಜಲಾವೃತಗೊಂಡಿದೆ. ಶಹಾಪುರದಲ್ಲಿ ವರುಣನ ಅಬ್ಬರಕ್ಕೆ 20ಕ್ಕೂ ಹೆಚ್ಚು ಮನೆಗಳು ನೆಲಸಮಗೊಂಡಿದೆ. 2 ದಿನಗಳಿಂದ ಬಿದ್ದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಮನೆ ಕಳೆದುಕೊಂಡ ಕುಟುಂಬ ಕಣ್ಣೀರು ಹಾಕುತ್ತಿದ್ದಾರೆ.

ಬಾಗಲಕೋಟೆಯ ಹುನಗುಂದದ ಓಂ ಶಾಂತಿ ನಗರ ಬಡಾವಣೆ ಸಂಪೂರ್ಣ ಜಲಾವೃತಗೊಂಡಿದೆ. ರಾಯಚೂರಿನ ಮಸ್ಕಿಯಲ್ಲಿ ಎರಡು ದಿನದ ಹಿಂದೆ ಹಳ್ಳದಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿ ಇನ್ನೂ ಪತ್ತೆಯಾಗಿಲ್ಲ. ಶೋಧ ಕಾರ್ಯ ಮುಂದುವರಿದಿದೆ. ಬಳ್ಳಾರಿ, ರಾಯಚೂರು, ಚಿಕ್ಕೋಡಿ ಭಾಗದಲ್ಲಿ ಬೆಳೆಗಳು ಸಂಪೂರ್ಣ ನೆಲಕಚ್ಚಿದ್ದು, ಅನ್ನದಾತ ಕಂಗಾಲಾಗಿದ್ದಾನೆ. ಮಹಾರಾಷ್ಟದ ಕೊಯ್ನಾ ಡ್ಯಾಂನಿಂದ 12 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಚಿತ್ರದುರ್ಗದ ಅಕ್ಕಿತಿಮ್ಮಯ್ಯನಹಟ್ಟಿ ಗ್ರಾಮದ ಕೆರೆ ಏರಿ ಬಿರುಕು ಬಿಟ್ಟಿದೆ. ಇನ್ನುಳಿದಂತೆ ಮಡಿಕೇರಿ, ಉಡುಪಿ ಭಾಗದಲ್ಲಿಯೂ ಭಾರೀ ಮಳೆಯಾಗುತ್ತಿದೆ. ಕೊಪ್ಪಳದಲ್ಲೂ ಭಾರೀ ಮಳೆಯಾಗ್ತಿದೆ. ಪರಿಣಾಮ ಕನಕಗಿರಿಯ ಕೆರೆ ಸಂಪೂರ್ಣ ಭರ್ತಿಯಾಗಿದ್ದು, ವರ್ಷಗಳ ಬಳಿಕ ಲಕ್ಷ್ಮೀದೇವಿ ಕೆರೆ ಮೈದುಂಬಿಕೊಂಡಿದ್ದಾಳೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಾರಣ ರಾಜ್ಯದಲ್ಲಿ ಇನ್ನೂ 3 ದಿನಗಳ ಕಾಲ ಧಾರಕಾರ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ನಾಡಿದ್ದು ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲಿ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಿದೆ.

 


Spread the love

About Laxminews 24x7

Check Also

ಬತ್ತಿದ ಮಲಪ್ರಭೆ, ಈ ನಾಲ್ಕು ಜಿಲ್ಲೆಗೆ ಜಲಕಂಟಕ

Spread the loveಬೆಳಗಾವಿ, ಮೇ.15: ಬೆಳಗಾವಿ(Belagavi) ಜಿಲ್ಲೆಯ ಕಣಕುಂಬಿ ಗ್ರಾಮದಲ್ಲಿ ಹುಟ್ಟುವ ಮಲಪ್ರಭಾ ನದಿ(Malaprabha River). ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ