ಹುಬ್ಬಳ್ಳಿ: ಬಿಜೆಪಿಯನ್ನು ಸೋಲಿಸುವುದೊಂದೇ ನಮ್ಮ ಗುರಿಯಾಗಬೇಕು. ಈ ಸಲ ಮತ್ತೆ ಅವರು ಅಧಿಕಾರಕ್ಕೆ ಬಂದರೆ ಸಿವಿಲ್ ವಾರ್ (ನಾಗರಿಕ ದಂಗೆ) ಶುರುವಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಹುಬ್ಬಳ್ಳಿಯಲ್ಲಿ ಗುರುವಾರ ಸ್ಥಳೀಯ ಜೆಡಿಎಸ್ ಮುಖಂಡರನ್ನು ಕಾಂಗ್ರೆಸ್‌ಗೆ ಬರಮಾಡಿ ಕೊಂಡ ನಂತರ ಮಾತನಾಡಿದರು.
ನೀವು ಜೆಡಿಎಸ್ ಬಿಟ್ಟು ಬಂದಿದ್ದು ಒಳ್ಳೆಯದಾಯಿತು. ಟಿಕೆಟ್ ಯಾರಿಗೇ ಸಿಕ್ಕರೂ ಅವರನ್ನು ಗೆಲ್ಲಿಸೋಣ. ಬಿಜೆಪಿಯನ್ನು ಸೋಲಿಸುವುದು ಮುಖ್ಯ ಎಂದು ಹೇಳಿದರು.
ಹೊಡಿ, ಬಡಿ, ಕಡಿ ಎನ್ನುವ ಮೂಲಕ ದೇಶದಲ್ಲಿ ಬಿಜೆಪಿಯವರು ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಸಾಮರಸ್ಯ ಹಾಳುಗೆಡವಿ ಅಶಾಂತಿ ಮೂಡಿಸುವುದೇ ಅವರ ಉದ್ದೇಶ. ದ್ವೇಷ ಕಕ್ಕುವ ಇಂತಹವರು ಇರಬೇಕಾ? ಎಂದರು.