Breaking News

ಬಿಜೆಪಿ ಮತ್ತೆ ಅಧಿಕಾರಕ್ಕೇರಿದರೆ ಸಿವಿಲ್ ವಾರ್ ಶುರು

Spread the love

ಹುಬ್ಬಳ್ಳಿ: ಬಿಜೆಪಿಯನ್ನು ಸೋಲಿಸುವುದೊಂದೇ ನಮ್ಮ ಗುರಿಯಾಗಬೇಕು. ಈ ಸಲ ಮತ್ತೆ ಅವರು ಅಧಿಕಾರಕ್ಕೆ ಬಂದರೆ ಸಿವಿಲ್ ವಾರ್ (ನಾಗರಿಕ ದಂಗೆ) ಶುರುವಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಸ್ಥಳೀಯ ಜೆಡಿಎಸ್ ಮುಖಂಡರನ್ನು ಕಾಂಗ್ರೆಸ್‌ಗೆ ಬರಮಾಡಿ ಕೊಂಡ ನಂತರ ಮಾತನಾಡಿದರು.

 

ನೀವು ಜೆಡಿಎಸ್ ಬಿಟ್ಟು ಬಂದಿದ್ದು ಒಳ್ಳೆಯದಾಯಿತು. ಟಿಕೆಟ್ ಯಾರಿಗೇ ಸಿಕ್ಕರೂ ಅವರನ್ನು ಗೆಲ್ಲಿಸೋಣ. ಬಿಜೆಪಿಯನ್ನು ಸೋಲಿಸುವುದು ಮುಖ್ಯ ಎಂದು ಹೇಳಿದರು.

ಹೊಡಿ, ಬಡಿ, ಕಡಿ ಎನ್ನುವ ಮೂಲಕ ದೇಶದಲ್ಲಿ ಬಿಜೆಪಿಯವರು ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಸಾಮರಸ್ಯ ಹಾಳುಗೆಡವಿ ಅಶಾಂತಿ ಮೂಡಿಸುವುದೇ ಅವರ ಉದ್ದೇಶ. ದ್ವೇಷ ಕಕ್ಕುವ ಇಂತಹವರು ಇರಬೇಕಾ? ಎಂದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ