Breaking News

ಬಜೆಟ್ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನಿಸಿದ ಸಿಎಂ!

Spread the love

ಬೆಂಗಳೂರು: ಬಿಜೆಪಿ ಅವಧಿಯ ಕೊನೆಯ ಬಜೆಟ್ ಮಂಡನೆ ಇದಾಗಿದ್ದು ಮುಖ್ಯಮಂತ್ರಿ ಬೊಮ್ಮಾಯಿಯ ಎರಡನೇ ಆಯವ್ಯಯ ಮಂಡನೆ ಇದಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಲೇ ಬೇಕು ಎನ್ನುವ ಗುರಿ ಹೊತ್ತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಬಾರಿಯ ಬಜೆಟ್​ ಮೂಲಕವೂ ಎಲ್ಲಾ ವರ್ಗದ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ.

 

ಕೃಷಿ:
ಕೃಷಿಕರಿಗೆ ಅನುಕೂಲವಾಗಲಿ ಎಂದು ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆಯ ಅಡಿಯಲ್ಲಿ ರೈತರಿಗೆ 10 ಸಾವಿರ ಸಹಾಯಧನ ನೀಡುವ ಬಗ್ಗೆ ನಿರ್ಧರಿಸಿದ್ದಾರೆ. ಈ ಮೂಲಕ ತುರ್ತು ಸಂದರ್ಭದಲ್ಲಿ ರೈತರಿಗೆ ಬೀಜ, ಗೊಬ್ಬರ ಖರೀದಿಗೆ ಅನುಕೂಲ ಆಗುವಂತೆ ಮಾಡಿದ್ದಾರೆ. ಸಣ್ಣ, ಅತಿ ಸಣ್ಣ ರೈತರಿಗಾಗಿ 180 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ಕಿಸಾನ್ ಯೋಜನೆಯನ್ನು ಘೋಷಿಸಲಾಗಿದೆ. ಇನ್ನು ಪ್ರಮುಖವಾಗಿ ರೈತರಿಗೆ ನೀಡಲಾಗುತ್ತಿದ್ದ 3 ಲಕ್ಷ ಬಡ್ಡಿ ರಹಿತ ಸಾಲವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.

ಶಿಕ್ಷಣ:
ಇನ್ನು ಶಿಕ್ಷಣ ಕ್ಷೇತ್ರಕ್ಕೂ ಭರಪೂರವಾಗಿ ಬಜೆಟ್ ಒದಗಿಸಿರುವ ಮುಖ್ಯಮಂತ್ರಿ, ವಿದ್ಯಾಶಕ್ತಿ ಯೋಜನೆಯನ್ನು ಬಜೆಟ್​ನಲ್ಲಿ ಆರಂಭಿಸಿದ್ದಾರೆ. ಸರ್ಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ದಾಖಲಾಗುವವರಿಗೆ ಶುಲ್ಕ ವಿನಾಯಿತಿಯನ್ನೂ ಘೋಷಿಸಿದ್ದಾರೆ. ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ‘ವಿದ್ಯಾವಾಹಿನಿ’ ಯೋಜನೆ ಅಡಿಯಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯವನ್ನು ಕಲ್ಪಿಸಿ ಕೊಡಲಾಗಿದೆ. ಅಷ್ಟಕ್ಕೇ ನಿಲ್ಲದ ಮುಖ್ಯಮಂತ್ರಿ ಬೊಮ್ಮಾಯಿ, 73 ಕರ್ನಾಟಕ ಪಬ್ಲಿಕ್ ಶಾಲೆ ಮತ್ತು 50 ಆದರ್ಶ ವಿದ್ಯಾಲಯಗಖಳಲ್ಲಿ ‘ಸೃಷ್ಟಿ’ ಟಿಂಕರಿಂಗ್ ಸ್ಥಾಪನೆ ಮಾಡುವ ಬಗ್ಗೆಯೂ ಘೋಷಿಸಲಾಗಿದೆ.

ಇನ್ನು ನೇಕಾರ ಸಮ್ಮಾನ ಯೋಜನೆಯಡಿ ಸಿಗುತ್ತಿದ್ದ ಸಹಾಯಧನವನ್ನು 3 ಸಾವಿರ ರೂಪಾಯಿಯಿಂದ 5 ಸಾವಿರಕ್ಕೆ ಏರಿಕೆ ಮಾಡಲಾಗಿದ್ದು ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದೆ. ಪೌರ ಆಸರೆ ಯೋಜನೆಯ ಅಡಿಯಲ್ಲಿ 5 ಸಾವಿರ ವಸತಿರ ಹಿತ ಪೌರ ಕಾರ್ಮಿಕರಿಗಾಗಿ 13 ಸಾವಿರ ಕೋಟಿ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿಕೊಡುಲಾಗುವುದು.

ಕಾರ್ಮಿಕರು:
ಈ ಬಾರಿ ರಾಜ್ಯದಲ್ಲಿ 19 ಕಾರ್ಮಿಕರ ವಿಮಾ ಆಸ್ಪತ್ರೆ ಆರಂಭಿಸಲಾಗಿದ್ದು ಬಿಪಿಎಲ್ ಕಾರ್ಡ್‌ದಾರರಿಗೆ ಮಾಸಿಕವಾಗಿ ನೀಡಲಾಗುತ್ತಿದ್ದ ಅಕ್ಕಿಯನ್ನು 5 ರಿಂದ 6 ಕೆ.ಜಿಗೆ ಹೆಚ್ಚಿಸಲಾಗಿದೆ. ಎಸ್-ಎಸ್‌ಟಿಗೆ ವಸತಿ ಯೋಜನೆಯಡಿ ನೀಡಲಾಗುತ್ತಿದ್ದ ಘಟಕ ಸಹಾಯಧನವನ್ನು 71.5 ಲಕ್ಷದಿಂದ 7.2 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಸಂಘಟಿತ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದ್ದು ಇದೇ ಸಂದರ್ಭ 30 ಲಕ್ಷ ಮಹಿಳೆಯರಿಗೆ ಉಚಿತ ಬಸ್​ಪಾಸ್ ಅನ್ನು ಘೋಷಿಸಲಾಗಿದೆ. ಇನ್ನು ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರಿನಲ್ಲಿ 16,000 ಕೋಟಿ ಕಾಮಗಾರಿಗಳಿಗೆ ಒತ್ತು ನೀಡಲಾಗಿದೆ.

ಮಹಿಳೆಯರು:
ಗೃಹಿಣಿಯರಿಗೆ ನೆರವಾಗಲು ಗೃಹಿಣಿ ಶಕ್ತಿ ಯೋಜನೆ ಹಾಗೂ ಭೂರಹಿತ ಮಹಿಳಾ ಕಾರ್ಮಿಕರಿಗೆ ತಿಂಗಳಿಗೆ 500 ರೂ. ಸಹಾಯ ಧನ ನೀಡಲಾಗುವುದು ಎಂದು ಘೋಷಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾದ ಬಳಿಕ ತಾಯಿ ಮತ್ತು ಮಗು ಮನೆಗೆ ತೆರಳಲು ನಗು-ಮಗು ವಾಹನವನ್ನೂ ಘೋಷಿಸಲಾಗಿದ್ದು ಗ್ರಾಮ ಪಂಚಾಯಿತಿ ಸದಸ್ಯರು, ಅತಿಥಿ ಶಿಕ್ಷಕರು, ಗ್ರಂಥಾಲಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಹಾಗೂ ಬಿಸಿಯೂಟ ಸಹಾಯಕರ ಗೌರವ ಧನವನ್ನು 1 ಸಾವಿರ ರೂ. ಹೆಚ್ಚಿಸಲಾಗಿದೆ.

ಕ್ರೀಡೆ:
ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ತೃತೀಯ ಹಂತದ ಆರೈಕೆ ಒದಗಿಸಲು ಕೋಲಾರ, ಬಾಗಲಕೋಟೆ, ಯಾದಗಿರಿ, ಗದಗ, ಚಿಕ್ಕಮಗಳೂರು, ರಾಮನಗರ, ವಿಜಯನಗರ ಹಾಗೂ ದೊಡ್ಡಬಳ್ಳಾಪುರದಲ್ಲಿ 50 ಹಾಸಿಗೆಗಳ ಕ್ರಿಟಿಕಲ್ ಕೇರ್ ವಿಭಾಗ ಸ್ಥಾಪನೆ ಮಾಡಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 15 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುಚವ ಯೋಜನೆ ಸರ್ಕಾರಕ್ಕಿದ್ದು, ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂ.ಯನ್ನು ಮೀಸಲಿರಿಸಲಾಗಿದೆ.

ಕೇಂದ್ರದ ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟವನ್ನು ಅಭಿವೃದ್ಧಿ ಮಾಡುವುದಾಗಿ ಬೊಮ್ಮಾಯಿ ಬಜೆಟ್​ನಲ್ಲಿ ಹೇಳಿದ್ದಾರೆ. 2.35 ಲಕ್ಷ ವಿದ್ಯುತ್ ಸಂಪರ್ಕರಹಿತ ಮನೆಗಳಿಗೆ 124 ಕೋಟಿ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ ಒದಗಿಸುವುದಕ್ಕೂ ಈ ಆರಿ ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದೆ


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ