Breaking News

ನದಿಯಲ್ಲಿ ಶವ ಪತ್ತೆ- ಗುಂಡು ಹಾರಿಸಿ ಪರಾರಿಯಾಗಿದ್ದವ ಎಂಬ ಶಂಕೆ

Spread the love

ನೂರು: ತಾಲ್ಲೂಕಿನ ಗಡಿ ಭಾಗದ ಕಾವೇರಿ ನದಿಯಲ್ಲಿ ವ್ಯಕ್ತಿಯೊಬ್ಬರ ಶವ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಈತ ಕಳ್ಳ ಬೇಟೆಗಾರ ಆಗಿರಬಹುದು ಎಂದು ಶಂಕಿಸಲಾಗಿದೆ.

ಕಾವೇರಿ ವನ್ಯಧಾಮದ ಗೋಪಿನಾಥಂ ವಲಯದ ಅಡಿಪಾಲರ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ ತಮಿಳುನಾಡಿನ ನಾಲ್ವರು ಬೇಟೆಗಾರರು ಜಿಂಕೆ ಬೇಟೆಯಾಡುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ‌ ಗುಂಡು ಹಾರಿಸಿ ಪರಾರಿಯಾಗಿದ್ದರು.

ಈ ಸಂದರ್ಭದಲ್ಲಿ ಅರಣ್ಯ‌ ಇಲಾಖೆ ಅಧಿಕಾರಿಗಳು ಕೂಡ ಗಾಳಿಯಲ್ಲಿ ಗುಂಡು ಹಾರಿಸಿದ್ದರು.

ಒಂದು ನಾಡ ಬಂದೂಕು ಹಾಗೂ ತೆಪ್ಪದಲ್ಲೇ ಎಲ್ಲ ಪರಿಕರಳಗನ್ನು ಬಿಟ್ಟು ಬೇಟೆಗಾರರು ಪರಾರಿಯಾಗಿದ್ದರು.

ಕಾವೇರಿ ನದಿಯ ತಮಿಳುನಾಡು ಭಾಗದಲ್ಲಿ ಶವ ಪತ್ತೆಯಾಗಿದೆ. ಮೃತಪಟ್ಟವನ ಹೆಸರನ್ನು ತಮಿಳುನಾಡಿನ ಗೋವಿಂದಪಾಡಿಯ ರಾಜ ಎಂದು ಗುರುತಿಸಲಾಗಿದೆ. ಈತ ಬೇಟೆಗಾರರ ತಂಡದಲ್ಲಿದ್ದ ಎಂದು ಶಂಕಿಸಲಾಗಿದೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ