Breaking News

ಮೂರು ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾರಿಗೆ ಒಲಿಯುತ್ತಾಳೆ ರಾಜ ರಾಜೇಶ್ವರಿ?

Spread the love

ಬೆಂಗಳೂರು: ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರುತ್ತಿದೆ. ಇಂದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ನಿಂದ ಕುಸುಮಾ ಹನುಮಂತರಾಯಪ್ಪ, ಬಿಜೆಪಿಯಿಂದ ಮುನಿರತ್ನ ಮತ್ತು ಜೆಡಿಎಸ್ ನಿಂದ ಕೃಷ್ಣಮೂರ್ತಿ ಬೈ ಎಲೆಕ್ಷನ್ ಅಖಾಡದಲ್ಲಿದ್ದು, ಆರ್.ಆರ್.ನಗರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಗಳಿವೆ.ನಾಮಪತ್ರ ಸಲ್ಲಿಕೆ ಹಿನ್ನೆಲೆ ರಾಜರಾಜೇಶ್ವರಿ ನಗರ ಜಂಟಿ ಆಯುಕ್ತರ ಕಚೇರಿಯ ಸುತ್ತಮುತ್ತ ಭದ್ರತೆ ಕೈಗೊಳ್ಳಲಾಗಿತ್ತು. ಮಂಗಳವಾರ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದ ಬೆನ್ನಲ್ಲೇ ಪಕ್ಷ ಟಿಕೆಟ್ ಘೋಷಣೆ ಮಾಡಿತ್ತು. ಇಂದು ಅಪಾರ ಬೆಂಬಲಿಗರು ಮತ್ತು ಸಚಿವರ ಜೊತೆ ಆಗಮಿಸಿದ ಮುನಿರತ್ನ ಅವರು ನಾಮಪತ್ರ ಸಲ್ಲಿಸಿ,

ಎಲ್ಲ ಒಳ್ಳೇ ರೀತಿಯಲ್ಲಿ ನಡೆದಿದೆ. ನನ್ನ ಮೇಲಿರುವ ಕ್ಷೇತ್ರದ ಜನತೆಯ ಋಣವನ್ನ ತೀರಿಸುತ್ತೇನೆ ಎಂದರು. ಮುನಿರತ್ನ ಅವರಿಗೆ ಡಿಸಿಎಂ ಅಶ್ವಥ್ ನಾರಾಯಣ್, ಸಚಿವರಾದ ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್, ಆರ್.ಅಶೋಕ್ ಮತ್ತು ಸುಧಾಕರ್ ಸೇರಿದಂತೆ ಹಲವರು ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕೆಪಿಎ ಆಸರೆ ಯೋಜನೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ

Spread the loveಗೋಕಾಕ: ಅವಿಸ್ಮರಣೀಯ ನೆನಪು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದು ಸದಾ ನೆನಪಿನಲ್ಲಿರುವಂತೆ ಮಾಡುವ ಛಾಯಾಗ್ರಾಹಕರಿಗೆ ಕೆಪಿಎ ಆಸರೆ ಯೋಜನೆ ಉಪಯುಕ್ತವಾಗಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ