Breaking News
Home / ಜಿಲ್ಲೆ / ಬೆಂಗಳೂರು / ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಟಿಕೆಟ್‌ ಬೇಕಾ?; ಇ-ಮೇಲ್ ಮಾಡಿ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಟಿಕೆಟ್‌ ಬೇಕಾ?; ಇ-ಮೇಲ್ ಮಾಡಿ

Spread the love

ಬೆಂಗಳೂರು, ಫೆಬ್ರವರಿ 19; ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವಜನಾರ್ದನ ರೆಡ್ಡಿಈ ಬಾರಿಯ ಚುನಾವಣೆಗೆ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ.

ಹಲವು ಮುಖಂಡರು ಸಹ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ.

ಭಾನುವಾರ ಟ್ವೀಟ್ ಮಾಡಿರುವ ಜನಾರ್ದನ ರೆಡ್ಡಿ ಪಕ್ಷದ ಟಿಕೆಟ್ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಸಹ ಅವರು ಬಿಡುಗಡೆ ಮಾಡಿದ್ದಾರೆ.

 

ಜನಾರ್ದನ ರೆಡ್ಡಿ ಗುರುವಾರ ಕೊಪ್ಪಳದಲ್ಲಿ ಸಿರಗುಪ್ಪ, ಕನಕಗಿರಿ, ನಾಗಠಾಣ, ಸಿಂಧನೂರು, ಹಿರಿಯೂರು ವಿಧಾನಸಭಾ ಕ್ಷೇತ್ರಗಳಿಗೆ ಈ ಬಾರಿಯ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ.

 

ಟಿಕೆಟ್ ಹಂಚಿಕೆ ಕುರಿತು ಮಾತನಾಡಿರುವ ಅವರು, “ಅವರು ಗೆಲ್ಲುತ್ತಾರೆ ಎಂಬ ನಂಬಿಕೆಯೊಂದಿಗೆ ಅಭ್ಯರ್ಥಿ ಘೋಷಣೆ ಮಾಡಿದ್ದೇವೆ. ಸಮೀಕ್ಷೆ ಮಾಡಿಸಿ, ಗೆಲ್ಲುವ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದೇವೆ. ನಾನು ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ” ಎಂದು ಸ್ಪಷ್ಟಪಡಿಸಿದರು.

 

ಜನಾರ್ದನ ರೆಡ್ಡಿ ಟ್ವೀಟ್
 ಭಾನುವಾರ ಟ್ವೀಟ್ ಮಾಡಿರುವ ಜನಾರ್ದನ ರೆಡ್ಡಿ, ‘ಕಳಕಳಿಯ ಮನವಿ ಆತ್ಮೀಯರೇ, ಕಳೆದ ಡಿಸೆಂಬರ್ 25ರಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಘೋಷಣೆಯಾದ ಮೇಲೆ ನಾಡಿನ ಎಲ್ಲೆಡೆ ಸಿಗುತ್ತಿರುವ ಅಭೂತಪೂರ್ವ ಬೆಂಬಲಕ್ಕೆ ನಾನು ಚಿರಋಣಿಯಾಗಿದ್ದೇನೆ’ ಎಂದು ಹೇಳಿದ್ದಾರೆ.

‘ಕಲ್ಯಾಣ ರಾಜ್ಯದ ಹಲವಾರು ಕ್ಷೇತ್ರಗಳಿಂದ ಪಕ್ಷದ ಟಿಕೆಟ್ ಆಕಾಂಕ್ಷಿಗಳು ತಮ್ಮನೂರಾರು ಅಭಿಮಾನಿಗಳೊಂದಿಗೆ ದಿನನಿತ್ಯ ಆಗಮಿಸುತ್ತಿದ್ದು ಪಕ್ಷದ ಮೇಲೆ ತಾವು ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ನಾನು ಆಭಾರಿಯಾಗಿದ್ದೇನೆ. ಆದರೆ ಬಂದವರ ಎಲ್ಲರೊಂದಿಗೆ ನಾನು ಹೆಚ್ಚಿನ ಸಮಯ ಕಳೆಯಲು ಆಗುತ್ತಿಲ್ಲ’ ಎಂದು ತಿಳಿಸಿದ್ದಾರೆ.

ಟಿಕೆಟ್ ಆಕಾಂಕ್ಷಿಗಳು

ಜನಾರ್ದನ ರೆಡ್ಡಿ ತಮ್ಮ ಟ್ವೀಟ್‌ನಲ್ಲಿ, ‘ದೂರದ ಊರುಗಳಿಂದ ಕಷ್ಟಪಟ್ಟು ಬರುತ್ತಿರುವವರಲ್ಲಿ ನನ್ನ ಕಳಕಳಿಯ ಮನವಿ ತಾವು ಯಾರು ಖುದ್ದಾಗಿ ನೂರಾರು ಜನರೊಂದಿಗೆ ಆಗಮಿಸುವುದು ಬೇಡ ಗಂಗಾವತಿಯ ನಿವಾಸದ ಹತ್ತಿರ ದಿನನಿತ್ಯ ಸಾವಿರಾರು ಸಂಖ್ಯೆಯ ಜನರು ಸೇರುತ್ತಿರುವುದು ಎಲ್ಲರೊಂದಿಗೆ ವೈಯಕ್ತಿಕವಾಗಿ ಮಾತನಾಡಲು ಆಗುತ್ತಿಲ್ಲ’ ಎಂದು ಹೇಳಿದ್ದಾರೆ.

‘ದಯವಿಟ್ಟು ಟಿಕೆಟ್ ಆಕಾಂಕ್ಷಿಗಳು ಕೆಳಗಿನ ಮೇಲ್ ಐಡಿಗೆ ತಮ್ಮ ವಿವರಗಳನ್ನು ಕಳುಹಿಸಿರಿ. ನಾನು ಈಗಾಗಲೇ ಕ್ಷೇತ್ರಗಳ ಸಮೀಕ್ಷೆಯನ್ನು ಮಾಡುತ್ತಿದ್ದೇನೆ ವರದಿಯ ಆಧಾರದ ಮೇಲೆ ಆಯಾ ಕ್ಷೇತ್ರಗಳಲ್ಲಿ ಸ್ಪರ್ಧೆ ಬಗ್ಗೆ ನಿರ್ಧರಿಸಿ ನಿಮ್ಮನ್ನು ಕರೆದು ಚರ್ಚಿಸುತ್ತೇನೆ ಅನ್ಯತಾ ಭಾವಿಸಬೇಡಿ ಗೌರವಗಳೊಂದಿಗೆ ತಮ್ಮ ವಿವರಗಳನ್ನು ಕೆಳಕಂಡ ಮೇಲ್ ಗೆ ಕಳುಹಿಸಿ’ ಎಂದು [email protected] ಎಂಬ ಇ-ಮೇಲ್ ಐಡಿ ನೀಡಿದ್ದಾರೆ.

ಯಾರು, ಎಲ್ಲಿಂದ ಸ್ಪರ್ಧೆ?

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಬಳ್ಳಾರಿಯಿಂದ ಕಣಕ್ಕಿಳಿಯುವ ನಿರೀಕ್ಷೆ ಇದೆ.

ಉಳಿದಂತೆ ಸಿರಗುಪ್ಪದಿಂದ ಧರೆಪ್ಪ ನಾಯಕ, ಕನಕಗಿರಿಯಿಂದ ಡಾ. ಚಾರುಲ್ ದಾಸರಿ, ನಾಗಠಾಣಾದಿಂದ ಶ್ರೀಕಾಂತ್, ಸಿಂಧನೂರು ಕ್ಷೇತ್ರದಿಂದ ನೆಕ್ಕಂಟಿ ಮಲ್ಲಿಕಾರ್ಜುನ, ಚಿತ್ರದುರ್ಗದ ಹಿರಿಯೂರು ಕ್ಷೇತ್ರದಿಂದ ಎಚ್. ಮಹೇಶ್ ಅಭ್ಯರ್ಥಿಯಾಗಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ