ಹುಬ್ಬಳ್ಳಿ, ಫೆಬ್ರವರಿ, 20: ಎಚ್.ಡಿ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ. ಹಾಗೂ ಪ್ರಲ್ಹಾದ್ ಜೋಶಿಯವರ ತೇಜೋವಧೆ ಮಾಡುವ ಹುನ್ನಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಧಾರವಾಡದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಲ್ಹಾದ್ ಜೋಶಿಯವರ ವಿರುದ್ಧ ಬಿಜೆಪಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ವೈಯಕ್ತಿಕವಾಗಿ ಜಾತಿ ನಿಂದನೆ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಕುಟುಂಬದ ವಿರುದ್ಧ ಬೃಹತ್ ಪ್ರತಿಭಟನೆ ಮಾಡಲಾಯಿತು. ಹಾಗೂ ಅಣುಕು ಶವಯಾತ್ರೆಯನ್ನು ಸಹ ನಡೆಸಿದರು. ಬಳಿಕ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಎಚ್.ಡಿ. ಕುಮಾರಸ್ವಾಮಿಯವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.