ಸಂಗೀತ ಕಛೇರಿಯಲ್ಲಿ ಶಾಸಕರ ಪುತ್ರನಿಂದ ಸೋನು ನಿಗಮ್​ ಮೇಲೆ ದಾಳಿ!

Spread the love

ಮುಂಬೈ: ಖ್ಯಾತ ಗಾಯಕ ಸೋನು ನಿಗಮ್ ಅವರ ಭದ್ರತಾ ಸಿಬ್ಬಂದಿ ಮತ್ತು ಶಿವಸೇನಾ ಶಾಸಕ ಪ್ರಕಾಶ್ ಫಾಟರ್‌ಪೇಕರ್ ಅವರ ಮಗ ಹಾಗೂ ಸೋದರಳಿಯ ನಡುವೆ ತಳ್ಳಾಟ ನಡೆದಿದ್ದು ಜಗಳದ ನಂತರ ಗಾಯಕ ಸೋನು ನಿಗಮ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

 

ಮುಂಬೈನ ಚೆಂಬೂರ್‌ನಲ್ಲಿ ಸೋನು ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಿದ್ದಾಗ ಇದು ಸಂಭವಿಸಿದ್ದು ವೈದ್ಯಕೀಯ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವರದಿಗಳ ಪ್ರಕಾರ, ಸೋನು ಸುರಕ್ಷಿತವಾಗಿದ್ದಾರೆ. ಆದರೆ ಅವರ ಸಂಗೀತ ಗುರು ಹಾಗೂ ಮಾರ್ಗದರ್ಶಕ ಗುಲಾಮ್ ಮುಸ್ತಫಾ ಖಾನ್ ಅವರ ಮಗ ರಬ್ಬಾನಿ ಖಾನ್ ಮತ್ತು ಅವರ ನಿಕಟ ಸಹವರ್ತಿ ಅಂಗರಕ್ಷಕ ಗಾಯಗೊಂಡಿದ್ದು ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಶಿವರಾತ್ರಿ ಹಬ್ಬದ ಬಳಿಕ ಬಜೆಟ್ ದಿನಾಂಕದ ಕುರಿತು ನಿರ್ಧಾರ: ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಬಳಿಕ ರಾಜ್ಯ ಬಜೆಟ್ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಬೆಳಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ