ಅಫ್ಘಾನಿಸ್ತಾನ,ಅ.14- ಎರಡು ಅಫ್ಘಾನ್ ಸೇನೆಯ ಹೆಲಿಕಾಪ್ಟರ್‍ಗಳು ಅಪಘಾತಕ್ಕೀಡಾಗಿ ಸುಮಾರು 15 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಹೆಲ್ಮಾಂಡ್ ಪ್ರಾಂತ್ಯದಲ್ಲಿ ನಡೆದಿದೆ.
ಪ್ರಾಂತೀಯ ರಾಜಧಾನಿ ಲಷ್ಕರ್ ಗಹ್‍ನ ನೈರುತ್ಯ ದಿಕ್ಕಿನಲ್ಲಿರುವ ನಾವಾ-ಎ-ಬರಾಕಜಾಯಿ ಜಿಲ್ಲೆಯಲ್ಲಿ ಮಧ್ಯರಾತ್ರಿ ಈ ದುರ್ಘಟನೆ ಸಂಭವಿಸಿದೆ. ಸುಮಾರು 15 ಮಂದಿ ಸಾವನ್ನಪ್ಪಿರಬಹುದೆಂದು ಎಂದು ತಿಳಿದುಬಂದಿದೆ.ಇದಕ್ಕೂ ಮುನ್ನ ಸೆಪ್ಟೆಂಬರ್ 24 ರಂದು ಉತ್ತರ ಬಾಗ್ಲಾನ್ ಪ್ರಾಂತ್ಯದಲ್ಲಿ ಅಫಘಾನ್ ವಾಯುಪಡೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ತಾಂತ್ರಿಕ ದೋಷದಿಂದಾಗಿ ಇಬ್ಬರು ಪೈಲಟ್‍ಗಳು ಸಾವನ್ನಪ್ಪಿದ್ದರು.