Breaking News

ಕಾಂತಾರ ಖ್ಯಾತಿಯ ರಿಷಭ್​ ಶೆಟ್ಟಿಗೆ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ!

Spread the love

ಬೆಂಗಳೂರು: ಸೋಮವಾರ ನಡೆದ ದಾದಾಸಾಹೇಬ್ ಫಾಲ್ಕೆ ಇಂಟರ್‌ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2023ರಲ್ಲಿ ಕಾಂತಾರ ಚಿತ್ರದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ, ‘MOst Promising Actor’ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಕಪ್ಪು ಶರ್ಟ್ ಮತ್ತು ಬಿಳಿ ಪಂಚೆಯೊಂದಿಗೆ ಎಲ್ಲರ ಗಮನವನ್ನು ಹಿಡಿದಿಟ್ಟುಕೊಂಡ ಶೆಟ್ರು ರೆಡ್ ಕಾರ್ಪೆಟ್ ಮೇಲೆ ಪ್ರಶಸ್ತಿಯೊಂದಿಗೆ ಪೋಸ್ ನೀಡಿದ್ದಾರೆ.

ರಿಷಭ್​ ಶೆಟ್ರು ತಮಗೆ ಸಿಕ್ಕ ಪ್ರಶಸ್ತಿಯನ್ನು ಪುನೀತ್ ರಾಜ್‌ಕುಮಾರ್ ಮತ್ತು ನಿರ್ದೇಶಕ ಎಸ್‌ಕೆ ಭಗವಾನ್ ಅವರಿಗೆ ಅರ್ಪಿಸಿದ್ದಾರೆ.

‘ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನನಗೆ ನೀಡಿದ್ದಕ್ಕಾಗಿ ಎಷ್ಟು ಧನ್ಯವಾದ ವ್ಯಕ್ತಪಡಿಸಿದರೂ ಸಾಲದು. ನನ್ನ ಮೇಲೆ ವಿಶ್ವಾಸವಿಟ್ಟು ಅವಕಾಶ ನೀಡಿದ ಹೊಂಬಾಳೆ ಫಿಲಂಸ್ ಮತ್ತು ವಿಜಯ್ ಕಿರಂಗಂದೂರು ಅವರಿಗೆ ನಾನು ಆಭಾರಿಯಾಗಿದ್ದೇನೆ. ಒಟ್ಟಿಗೆ ಹೆಚ್ಚು ಮತ್ತು ಉತ್ತಮ ಚಿತ್ರಗಳನ್ನು ಮಾಡಲು ನಾನು ಕಾಯಲು ಸಾಧ್ಯವಿಲ್ಲ’ಎಂದು ಹೇಳಿದರು.

ಕಾಂತಾರ ಚಿತ್ರಕ್ಕೆ ವಿಮರ್ಶಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು/ ಅಷ್ಟೇ ಅಲ್ಲದೇ, 2022ರ ಅತಿದೊಡ್ಡ ಪ್ಯಾನ್-ಇಂಡಿಯಾ ಬ್ಲಾಕ್‌ಬಸ್ಟರ್‌ಗಳಲ್ಲಿ ಒಂದಾಗಿ ಹೊರಹೊಮ್ಮಿತ್ತು. ಕಾಂತಾರ ಅಭಿಮಾನಿಗಳಿಂದಲೂ ಮೆಚ್ಚುಗೆ ಪಡೆದಿದೆ.


Spread the love

About Laxminews 24x7

Check Also

ಕನ್ನಡಪರ ಹೋರಾಟಗಾರರು ತಮ್ಮ ಸುಪುತ್ರನ ವಿವಾಹ ಸಮಾರಂಭದ ಆಮಂತ್ರಣ ಪತ್ರವನ್ನು ನೀಡಿದರು.

Spread the loveಹಿರಿಯ ಕನ್ನಡಪರ ಹೋರಾಟಗಾರರು, ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರು ಇಂದು ಬೆಂಗಳೂರಿನ ಗೃಹಕಚೇರಿಯಲ್ಲಿ ಸಚಿವ ಸತೀಶ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ