Breaking News

ಮೂವರು ಅಂತರರಾಜ್ಯ ಕಳ್ಳರ ಬಂಧನ

Spread the love

ಕಾಗವಾಡ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷ್ಣಾನದಿ ಹಾಗೂ ಬಾವಿಗಳಲ್ಲಿ ಅಳವಡಿಸಿದ್ದ ನೀರೆತ್ತುವ ಪಂಪ್‌ಸೆಟ್‌, ಮೋಟಾರುಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ
ಮೂವರು ಆರೋಪಿಗಳನ್ನು ಸ್ಥಳೀಯ ಪೋಲಿಸರು ಸೋಮವಾರ ಬಂಧಿಸಿದ್ದಾರೆ.

 

ಯೋಗೇಶ ಕರೋಲಿ, ಸತೀಶ್‌ ಸೂರ್ಯವಂಶಿ, ವಿಜಯ ಬಿಷೆ ಬಂಧಿತರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ಡಾ.ಸಂಜೀವ್‌ ಪಾಟೀಲ, ‘ಅಥಣಿ ಡಿವೈಎಸ್ಪಿ‌ ಶ್ರೀಪಾದ ಜಲ್ದೆ, ಸಿಪಿಐ ರವೀಂದ್ರ ನಾಯ್ಕೋಡಿ ಮತ್ತು ಕಾಗವಾಡ ಪಿಎಸ್‌ಐ ಎಚ್.ಕೆ. ನರಳೆ ನೇತೃತ್ವದ ಒಂದು ವರ್ಷ ಕಾರ್ಯಾಚರಣೆ ನಡೆಸಿ, ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿದೆ. ಅವರಿಂದ ₹7 ಲಕ್ಷ ಮೌಲ್ಯದ 36 ಪಂಪ್‌ಸೆಟ್, ಕೃತ್ಯಕ್ಕೆ ಬಳಸಿದ್ದ ಗೂಡ್ಸ್ ವಾಹನ ಮತ್ತು ಬೈಕ್‌ ವಶಪಡಿಸಿಕೊಳ್ಳಲಾಗಿದೆ’ ಎಂದರು.

ಪ್ರಕರಣ ಭೇದಿಸಿದ ತಂಡಕ್ಕೆ ₹10 ಸಾವಿರ ನಗದು ಬಹುಮಾನ ಘೋಷಿಸಿದರು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ