Breaking News

ಸರ್ಕಾರಿ ನೌಕರರು ಮಾರ್ಚ್‌ 1 ರಿಂದ ಕರ್ತವ್ಯಕ್ಕೆ ಗೈರಾಗುವುದಕ್ಕೆ ಕರೆ ಕೊಟ್ಟ ರಾಜ್ಯ ಸರ್ಕಾರಿ ನೌಕರರ ಸಂಘ

Spread the love

ಬೆಂಗಳೂರು: ಏಳನೇ ವೇತನ ಆಯೋಗ ಜಾರಿ ಸೇರಿದಂತೆ ಹಲವು ಸೌಲಭ್ಯಗಳನ್ನು ಜಾರಿಗೆ ತರುವುದರಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿರುವ ರಾಜ್ಯ ಸರ್ಕಾರಿ ನೌಕರರ ಸಂಘವು ಮಾರ್ಚ್‌ 1 ರಿಂದ ಕರ್ತವ್ಯಕ್ಕೆ ಗೈರಾಗುವ ಹೋರಾಟ ನಡೆಸಲು ಕರೆ ನೀಡಿದೆ.

 

ಇಂದು ನಡೆದ ಸರ್ಕಾರಿ ನೌಕರರ ಸಂಘದ ಸುಮಾರು 8 ಸಾವಿರ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಈ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್‌ ಷಡಾಕ್ಷರಿ ತಿಳಿಸಿದ್ದಾರೆ. ಹಳೆ ಪಿಂಚಣಿ ಸೇರಿದಂತೆ ನಮ್ಮ ಹಲವು ಮನವಿಗಳನ್ನು ಆಲಿಸಿ ಕೂಡಲೇ ಜಾರಿ ಮಾಡಬೇಕು ಅಂತ ಒತ್ತಾಯಿಸಿದ್ದು, ಇವುಗಳನ್ನು ಸರ್ಕಾರ ಮಾರ್ಚ್‌ 1 ರ ಒಳಗೆ ತೀರ್ಮಾನ ಪ್ರಕಟಿಸದೇ ಇದ್ದಲ್ಲಿ ಅನಿರ್ಧಿಷ್ಟಾವಧಿಯ ಈ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುವುದು ಅಂಥ ಸರ್ಕಾರಕ್ಕೆ ಒತ್ತಡ ಹಾಕಿದ್ದಾರೆ.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ