Breaking News

ಇನ್ನೊಂದು ವಾರದಲ್ಲ ‘15,000 ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ’ ಪ್ರಕಟ – ಸಚಿವ ಬಿ.ಸಿ ನಾಗೇಶ್

Spread the love

ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ( Karnataka Teacher Recruitment 2023 ) ಇನ್ನೊಂದು ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.

ನಾಗೇಶ್ ( Minister BC Nagesh ) ತಿಳಿಸಿದರು.

ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿವಾಹಿತ ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಭ್ಯರ್ಥಿಗಳ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್, ವಿವಾಹಿತ ಮಹಿಳೆಯರು ಸಲ್ಲಿಸಿರುವ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ಮುಂದುವರೆಸುವಂತೆ ಆದೇಶದಲ್ಲಿ ತಿಳಿಸಿತ್ತು.

ಈ ಕುರಿತು ಮುಖ್ಯ ಕಾರ್ಯದರ್ಶಿಯವರು, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿ ಪರಿಷ್ಕರಿಸಲು ತೀರ್ಮಾನಿಸಲಾಗಿತ್ತು. ಮುಂದಿನ ಶೈಕ್ಷಣಿಕ ವರ್ಷದ ಆರಂಭದ ವೇಳೆಗೆ ಹೊಸ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.


Spread the love

About Laxminews 24x7

Check Also

ಅಡಿಕೆ ಸಾಗಿಸುತ್ತಿದ್ದ VRL ಲಾರಿ ತೋಟಕ್ಕೆ ಉರುಳಿ ಸಂಪೂರ್ಣ ಜಖಂ!

Spread the loveಶಿರಸಿ:ಶಿರಸಿಯಿಂದ ಹುಬ್ಬಳ್ಳಿಗೆ ಅಡಿಕೆ ಸಾಗಿಸುತ್ತಿದ್ದ VRL ಸಂಸ್ಥೆಗೆ ಸೇರಿದ ಲಾರಿಯೊಂದು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ