Breaking News

ಬಿಜೆಪಿಗೆ ಸಿದ್ದಾಂತವಿಲ್ಲ, ಜೆ.ಪಿ.ನಡ್ಡಾಗೆ ರಾಜಕೀಯ ಜ್ಞಾನವೂ ಇಲ್ಲ: ಸಿದ್ದರಾಮಯ್ಯ

Spread the love

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟಿಲ್‌ಗೆ ರಾಜಕೀಯ ಪರಿಜ್ಞಾನ ಇಲ್ಲ ಅಂದುಕೊಂಡಿದ್ದೆ. ಆದರೆ ಈಗ ಅರ್ಥವಾಗುತ್ತಿದೆ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ರಾಜಕೀಯ ಜ್ಞಾನ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದರು.

 

‘ಕಾಂಗ್ರೆಸ್ ಪಕ್ಷಕ್ಕೆ ಸಿದ್ಧಾಂತ ಇಲ್ಲ. ಸಿದ್ದರಾಮಯ್ಯ ಕಡು ಭ್ರಷ್ಟ’ ಎಂಬ ಜೆ.ಪಿ.ನಡ್ಡಾ ಅವರ ಆರೋಪಕ್ಕೆ ಇಲ್ಲಿನ ಖಾಸಗಿ ಹೆಲಿಪ್ಯಾಡ್‌ನಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ‘ಬಿಜೆಪಿಗೆ ಸಿದ್ದಾಂತ ಇಲ್ಲ. ಜನರನ್ನು ಪ್ರಚೋದಿಸಿ, ದ್ವೇಷದ ರಾಜಕಾರಣ ಮಾಡುವುದು ಹಾಗೂ ಸಿದ್ದರಾಮಯ್ಯ ಅವರನ್ನು ಮುಗಿಸಿ ಎನ್ನುವುದು ಸಿದ್ಧಾಂತವಾ’ ಎಂದು ಪ್ರಶ್ನಿಸಿದರು.

‘ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಸೇರಿ ಬಿಜೆಪಿಯ ರಾಷ್ಟ್ರೀಯ ನಾಯಕರು ನೂರು‌ ಬಾರಿ ಕರ್ನಾಟಕಕ್ಕೆ ಬಂದರೂ ಪ್ರಯೋಜನವಾಗದು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ. ರಾಜ್ಯದ ಜನರು ಈಗಾಗಲೇ ತೀರ್ಮಾನ ಮಾಡಿದ್ದಾರೆ’ ಎಂದು ಹೇಳಿದರು.

‘ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಭಾರೀ ಅವ್ಯವಹಾರ ಆಗಿದ್ದರೆ ತನಿಖೆ ಮಾಡಿಸಿ. ನಮ್ಮ ಕಾಲದಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ದಾಖಲೆ ಇದ್ದರೆ ಕ್ರಮ ಕೈಗೊಳ್ಳಿ. ಸರ್ಕಾರ ನಿಮ್ಮದೇ ಇದೆ, ನೀವೇ ಅಧಿಕಾರದಲ್ಲಿದ್ದೀರಿ, ನಿಮ್ಮ ಕೈ ಯಾರು ಹಿಡಿದಿದ್ದಾರೆ, ಯಾಕೆ ಹಿಂದೇಟು ಹಾಕುತ್ತೀರಿ’ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು

Spread the loveಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್​ 1 ರಿಂದ ಜಿಲ್ಲೆಯಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ