Breaking News

ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿಯಿಂದಲೇ ಹೆಂಡತಿ, ಮಕ್ಕಳ ಹತ್ಯೆ!

Spread the love

ಚಿಕ್ಕಬಳ್ಳಾಪುರ: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಸೇರಿ ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಕೊಂದು ವಿಷ ಸೇವಿಸಿ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿಡ್ಲಘಟ್ಟ ತಾಲೂಕಿನ ಯೆಣ್ಣೂರು ಗ್ರಾಮದಲ್ಲಿ ನಡೆದಿದೆ.

ವರ್ಷಿತಾ(12), ಸ್ನೇಹಾ(9) ಇಬ್ಬರು ಪುತ್ರಿಯರು, ಪತ್ನಿ ನೇತ್ರಾವತಿ(37) ಹತ್ಯೆಗೀಡಾದ ದುರ್ದೈವಿಗಳು.

ಇವರಿಗೆ ಬೆಂಕಿ ಹಚ್ಚಿದ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪತಿ ಸೊನ್ನೇಗೌಡ ಸ್ಥಿತಿ ಗಂಭಿರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

 

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತಿದ್ದ ಸೊನ್ನೇಗೌಡ ರಾತ್ರಿ ಪತ್ನಿಗೆ ಬೆಂಕಿ ಹಚ್ಚಿದ ಬಳಿಕ ತನ್ನಿಬ್ಬರು ಮಕ್ಕಳಿಗೂ ಬೆಂಕಿ ಹಚ್ಚಿದ ಬಳಿಕ ತಾಯಿ ಮಕ್ಕಳು ಕಿರುಚಾಡಿದ್ದಾರೆ. ಸ್ಥಳೀಯರೇ ಬೆಂಕಿ ಆರಿಸಿದ್ದಾರೆ. ಆದರೆ ಅಷ್ಟೊತ್ತಗೆ ತೀವ್ರವಾಗಿ ಬೆಂಕಿಯಲ್ಲಿ ಉರಿಯುತ್ತಿದ್ದ ತಾಯಿ ಮಕ್ಕಳು ಮೃತಪಟ್ಟಿದ್ದಾರೆ. ಸೊನ್ನೇಗೌಡ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಘಟನೆ ಮಾಹಿತಿ ತಿಳಿದು ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ ಭೇಟಿ ನೀಡಿದ್ದಾರೆ. ಸದ್ಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ