Breaking News

ಮುಗಳಖೋಡ: ‘ವಿವಿಧ ಸಮಾಜಗಳ ಏಳಿಗೆಗಾಗಿ ಬಿಜೆಪಿ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ’ ಎಂದ ಬಿಜೆಪಿ

Spread the love

ಮುಗಳಖೋಡ: ‘ವಿವಿಧ ಸಮಾಜಗಳ ಏಳಿಗೆಗಾಗಿ ಬಿಜೆಪಿ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ’ ಎಂದು ಬಿಜೆಪಿ ವಿಜಯಪುರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ ಹೇಳಿದರು.

‘ಮಾಳಿ-ಮಾಲಗಾರ, ಹಡಪದ, ಹೂಗಾರ, ಗಾಣಿಗೆ ಸಮಾಜದ ನಿಗಮ ಘೋಷಣೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 

ಡಾ.ಸಿ.ಬಿ. ಕುಲಿಗೋಡ ಮಾತನಾಡಿ, ‘ನಿಗಮ ಘೋಷಿಸಲು ಕಾರಣರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಲಕ್ಷ್ಮಣ ಸವದಿ, ಶಾಸಕರಾದ ಪಿ. ರಾಜೀವ್, ಬಾಲಚಂದ್ರ ಜಾರಕಿಹೊಳಿ, ಸಚಿವ ಗೋವಿಂದ ಕಾರಜೋಳ ಅವರಿಗೂ ಕೃತಜ್ಞತೆಗಳು ಸಲ್ಲುತ್ತವೆ’ ಎಂದರು,

ರಮೇಶ ಯಡವಣ್ಣವರ, ಗೋಪಾಲ ಯಡವಣ್ಣವರ, ರಮೇಶ ಖೇತಗೌಡರ, ಮಲ್ಲಿಕಾರ್ಜುನ ಖಾನಗೌಡರ, ವಿಠ್ಠಲ ಯಡವನವರ್, ಮಹಾಂತೇಶ ಯರಡತ್ತಿ, ಹಾಲಪ್ಪ ಶೇಗುಣಸಿ, ಶಿವಪ್ಪ ಹಳ್ಳೂರ, ರಾಮಣ್ಣ ಖೇತಗೌಡರ, ರಾಜು ನಾಯಕ, ರಾಜು ಮುಧೋಳ ಇದ್ದರು.

ಇದಕ್ಕೂ ಮುನ್ನ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ