ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅವಧಿಯಲ್ಲಿ ಜಾತಿ ಮತ್ತು ಧರ್ಮದ ರಾಜಕಾರಣ ಬಿಟ್ಟು ಬೇರೆ ಏನೂ ಮಾಡಲಿಲ್ಲ ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ತೀವ್ರ ಟೀಕಾಪ್ರಹಾರ ನಡೆಸಿದರು.
ಬೆಳಗಾವಿಯಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಚುನಾವಣೆ ಬಂದಾಗಲೊಮ್ಮೆ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರು ರೈತರಿಗೆ ಏನೂ ಮಾಡಲಿಲ್ಲ ಎಂದು ನಿರಾದಾರ ಆರೋಪ ಮಾಡುತ್ತಾರೆ.
ಇದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಕಟುಕಿದರು.
ಸಿದ್ದರಾಮಯ್ಯ ಅವರು ನಾನು ಅತೀ ಹೆಚ್ಚು ಬಾರಿ ಬಜೆಟ್ ಮಂಡಿಸಿದ್ದೇನೆ. ಇದುವರೆಗೆ 11 ಸಲ ಬಜೆಟ್ ಮಂಡಿಸಿರುವೆ ಎಂದು ಹೇಳುತ್ತಾರೆ. ಆದರೆ ರೈತ ಸಮುದಾಯಕ್ಕೆ ಯಾವುದೇ ಕೊಡುಗೆ ನೀಡಲಿಲ್ಲ. ಹಾಗೇನಾದರೂ ರೈತರಿಗೆ ಒಳ್ಳೆಯ ಕೆಲಸ ಮಾಡಿದ್ದರೆ ಇವತ್ತು ಮನೆಯಲ್ಲಿ ಕುಳಿತು ಕೊಳ್ಳುವ ಸ್ಥಿತಿ ಬರುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.