Breaking News

ಬೆಳಗಾವಿಯ ಮಾರಿಹಾಳಪೊಲೀಸ್‌ರಿಂದ ಇಬ್ಬರು ಕೊಲೆ ಆರೋಪಿತರ ಬಂಧನ

Spread the love

ಬೆಳಗಾವಿ: ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬಸರೀಕಟ್ಟಿ ಗ್ರಾಮದಲ್ಲಿ  ಫೆ.20ರ ರಾತ್ರಿ ವೇಳೆಯಲ್ಲಿ ಮಾರುತಿ@ಪವನ ತಂದೆ ಪರಶುರಾಮ ಖನ್ನುಕರ, (32)  ಎನ್ನುವವನನ್ನು ಕೊಲೆ ಮಾಡಿದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
 ಯಾರೋ ದುಷ್ಕರ್ಮಿಗಳು ಮಾರುತಿಯನ್ನು ಕೊಲೆ ಮಾಡಿದ ಬಗ್ಗೆ ಆತನ ತಂದೆ  ಪರಶುರಾಮ ಬಸವಂತ ಖನ್ನುಕರ್ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸ್ ಆಯುಕ್ತರು, ಡಿಸಿಪಿ (ಕಾ&ಸು) ಬೆಳಗಾವಿ ನಗರ ಹಾಗೂ   ಗೋಪಾಲಕೃಷ್ಣ ಗೌಡರ ಎಸಿಪಿ ಬೆಳಗಾವಿ ಗ್ರಾಮೀಣ ಉಪವಿಭಾಗ ಇವರ ಮಾರ್ಗದರ್ಶನದಲ್ಲಿ ಮಾರಿಹಾಳ ಪೊಲೀಸ್ ಠಾಣೆಯ ಪಿಐ ಚಂದ್ರಶೇಖರ ತಿಗಡಿ ನೇತೃತ್ವದ ತಂಡವು ಕಾರ್ಯಪ್ರವೃತ್ತರಾಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
1] ಸೋಮನಾಥ ಗುಂಡು ಗೋಮನ್ನಾಟೆ. (25) ಸಾ ತಾನಾಜಿ ಗಲ್ಲ, ನಿಲಜಿ. ತಾ,ಜಿ!! ಬೆಳಗಾವಿ,
2] ಪ್ರಶಾಂತ@ಪರಶುರಾಮ ವಸಂತ ಮೋದಗೇಕರ, (27) ಸಾ ಬ್ರಹ್ಮ ನಗರ, ನಿಲಜಿ. ತಾ,ಜಿ|| ಬೆಳಗಾವಿ ಬಂಧಿತರು.
ಇವರನ್ನು ಪತ್ತೆ ಮಾಡಿ ದಿನಾಂಕ 23/02/2023 ರಂದು ಬಂಧಿಸಿ  ನ್ಯಾಯಾಲಯಕ್ಕೆ ಹಾಜರ ಪಡಿಸಲಾಗಿದೆ. ಪ್ರಕರಣದ ತನಿಖೆ ಮುಂದುವರೆಸಲಾಗಿದೆ.

Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ