Breaking News

ರಾಯಬಾಗ ತಾಲ್ಲಕಿನ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ವಿರುದ್ಧ ಕೋವಿಡ್ ನಿರ್ವಹಣೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಆರೋಪ

Spread the love

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲ್ಲಕಿನ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ವಿರುದ್ಧ ಕೋವಿಡ್ ನಿರ್ವಹಣೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಆರೋಪ ಕೇಳಿ ಬಂದಿದ್ದು, ತಹಶೀಲ್ದಾರ್ ವಿಚಾರಣೆ ಆರಂಭವಾಗಿದೆ.

ಕೋವಿಡ್ ನಿರ್ವಹಣೆಯ 1.49 ಕೋಟಿ ಅನುದಾನವನ್ನು ತಮ್ಮ ಸ್ವಂತ ಖಾತೆಗೆ ತಹಶೀಲ್ದಾರ್ ವರ್ಗಾಯಿಸಿಕೊಂಡು ದುರ್ಬಳಕೆ ಮಾಡಿದ್ದಾರೆ ಎಂದು ಕುಡಚಿ ಶಾಸಕ ಪಿ.ರಾಜೀವ್  ವಿಧಾನಮಂಡಲ ಅಧಿವೇಶನದಲ್ಲಿ  ಆರೋಪಿಸಿದ್ದರು.

ಕೆಲ ಸಂಘಟನೆಗಳು ತನಿಖೆಗೆ ಜಿಲ್ಲಾಧಿಕಾರಿಗೆ ಒತ್ತಾಯಿಸಿ, ಮನವಿ ಸಲ್ಲಿಸಿದ್ದರು. ಇದರಿಂದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಚಿಕ್ಕೋಡಿ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ, ಬುಡಾ ಆಯುಕ್ತ, ಎಡಿಎಚ್‌ಒ ಒಳಗೊಂಡ ತಂಡ ರಚಿಸಿದ್ದಾರೆ. ಈ ತಂಡ ಈಚೆಗೆ ವಿಚಾರಣೆ ಆರಂಭಿಸಿದೆ.


Spread the love

About Laxminews 24x7

Check Also

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

Spread the loveಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ