ಪುಣೆ: ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಸಿಂಗ್ ಪಾಟೀಲ್ ಅವರ ಪತಿ ದೇವಿಸಿಂಗ್ ರಣಸಿಂಗ್ ಪಾಟೀಲ್ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.
ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಪ್ರತಿಭಾ ದೇವಿ ಸಿಂಗ್ ಪಾಟೀಲ್, ಪುತ್ರ, ಕಾಂಗ್ರೆಸ್ ನಾಯಕ ರಾಜೇಂದ್ರ ಸಿಂಗ್ ಶೆಖಾವತ್ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಫೆ.12 ರಂದು ತನ್ನ ಪುಣೆಯ ನಿವಾಸದಲ್ಲಿ ಹುಲ್ಮಾಲುಹಾಸಿನ ಮೇಲೆ ಕುಸಿದುಬಿದ್ದಿದ್ದರು ಎಂದು ಹೇಳಲಾಗಿದೆ.
ಆ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆವ ಆ ಬಳಿಕ ಅವರಿಗೆ ಬೇರೆ ಬೇರೆ ತೊಂದರೆಗಳು ಕಾಣಿಸಿಕೊಂಡಿದ್ದವು. ಬಿಪಿ, ಕಿಡ್ನಿ ವೈಫಲ್ಯ ಮುಂತಾದವುಗಳಿಂದಾಗಿ ಅವರು ನಿಧನ ಹೊಂದಿದ್ಧಾರೆ ಎಂದು ವೈದ್ಯರು ತಿಳಿಸಿದ್ದಾರೆ.
Laxmi News 24×7