Breaking News

ಧಾರವಾಡದಲ್ಲಿ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತ್ಯು

Spread the love

ಧಾರವಾಡ : ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯ ತೇಗೂರ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದ ಭೇಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿಯಿಂದ ಧಾರವಾಡದ ಕಡೆಗೆ ಬರುತ್ತಿದ್ದ ಕಾರು ಲಾರಿಗೆ ಹಿಂಬದಿಯಿಂದ ಗುದ್ದಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.

 

ಮೃತ ದುರ್ದೈವಿಗಳು ನಾಗಪ್ಪ ಈರಪ್ಪ ಮುದ್ದೊಜಿ(29)ಮಹಂತೇಶ್ ಬಸಪ್ಪ ಮುದ್ದೊಜಿ (40) ಬಸವರಾಜ್ ಶಿವಪುತ್ರಪ್ಪ ನರಗುಂದ(35) ನಿಚ್ಚಣಕಿ ಗ್ರಾಮದ ಶ್ರೀಕುಮಾರ್ ನರಗುಂದ (05) ಪಾದಚಾರಿಯಾಗಿದ್ದ ಹೆಬ್ಬಳಿ ಮೂಲದ ಧಾರವಾಡದಲ್ಲಿದ್ದ ಈರಣ್ಣಾ ಗುರುಸಿದ್ದಪ್ಪ ರಾಮನಗೌಡರ್ (35) ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳಾದ ಶ್ರವಣ ಕುಮಾರ್ ಬಸವರಾಜ ನರಗುಂದ ವಯಸ್ಸು (07) ಮಡಿವಾಳಪ್ಪ ರಾಜು ಅಳ್ನಾವರ (22) ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಪ್ರಕಾಶ್ ಗೌಡ( 22), ಮಂಜುನಾಥ (22) ಧಾರವಾಡದ ಜಿಲ್ಲಾ ಆಸ್ಪತ್ರೆ ಒಳರೋಗಿಯಾಗಿ ದಾಖಲಾಗಿದ್ದಾರೆ.

ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.


Spread the love

About Laxminews 24x7

Check Also

ಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಪ್ರಮುಖವಾಗಿ ಪಕ್ಷದ ಸಂಘಟನೆ ವಿಷಯದಲ್ಲಿ ಚರ್ಚೆ

Spread the loveಬೆಂಗಳೂರು, ಜುಲೈ 7: ಕೆಪಿಸಿಸಿ ಕಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ