ಬೆಂಗಳೂರು: ಇತ್ತೀಚೆಗೆ, ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದ ನಿರ್ಮಾಪಕರು ಚಿತ್ರದ ಭಾಗ-2 ಶೀಘ್ರದಲ್ಲೇ ತೆರೆಗೆ ಬರಲು ಸಿದ್ಧವಾಗಿದೆ ಎಂದು ಖಚಿತಪಡಿಸಿದ್ದಾರೆ ಮತ್ತು ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಪ್ರಸ್ತುತ ಭರದಿಂದ ಸಾಗುತ್ತಿವೆ.
ಈ ಮಧ್ಯೆ, ಕಾಂತಾರ ಭಾಗ-2ರಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲು ಚಿತ್ರತಂಡ ರಜನಿಕಾಂತ್ ಅವರನ್ನು ಸಂಪರ್ಕಿಸಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಆದರೆ, ಚಿತ್ರತಂಡ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಹಾಗಾಗಿ ಚಿತ್ರತಂಡದಿಂದ ಅಧಿಕೃತ ಪ್ರಕಟಣೆ ಹೊರಬಿದ್ದ ನಂತರವೇ ಸುದ್ದಿ ಖಚಿತವಾಗಲಿದೆ