ಉಡುಪಿ: ರಾಜ್ಯ ಸರ್ಕಾರ ಮದ್ಯಪಾನದ ವಯಸ್ಸನ್ನು 21 ರಿಂದ 18 ವರ್ಷಕ್ಕೆ ಇಳಿಕೆ ಮಾಡಿರುವು ಆಘಾತಕಾರಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮದ್ಯ ಸೇವನೆ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತಿದೆ. ದೇಶದಾದ್ಯಂತ ಮದ್ಯಪಾನವನ್ನು ನಿಷೇಧ ಮಾಡಬೇಕೆಂದು ಗಾಂಧೀಜಿ 75 ವರ್ಷದ ಹಿಂದೆಯೇ ಸಲಹೆ ಕೊಟ್ಟಿದ್ದರು.
ಆದರೆ ಮದ್ಯಪಾನವನ್ನೇ ಅನುಸರಿಸಿ ಸರಕಾರಗಳು ರಾಜಕಾರಣ ಮಾಡುತ್ತಿವೆ ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಾಕಿದರು.
ವಿದ್ಯಾರ್ಥಿಗಳು, ಕಾರ್ಮಿಕರು, ರೈತರು ಮಧ್ಯಪಾನಕ್ಕೆ ಬಲಿಯಾಗುತ್ತಿದ್ದಾರೆ. ಇದನ್ನು ಅರಿತರೂ ಸರ್ಕಾರ ಮಾತ್ರ ಮದ್ಯಪಾನಕ್ಕೆ ಕಡಿವಾಣ ಹಾಕದೆ ಪ್ರೋತ್ಸಾಹ ಮಾಡುತ್ತಾ ಬರುತ್ತಿದೆ. ರಾಜ್ಯ ಸರ್ಕಾರ ಈ ಆದೇಶವನ್ನು ಕೂಡಲೇ ಹಿಂಪಡೆದುಕೊಳ್ಳಬೇಕು. ಯುವಕರು ತಪ್ಪು ದಾರಿಗೆ ಇಳಿಯುವುದನ್ನು ತಪ್ಪಿಸಿಬೇಕಿದೆ ಎಂದರು.