ತೆಲಂಗಾಣ : ನಡುರಸ್ತೆಯಲ್ಲೆ ಹೃದಯಾಘಾತಗೊಂಡ ವ್ಯಕ್ತಿಯೊಬ್ಬನಿಗೆ ಸಿಪಿಆರ್ ನೀಡಿ ಬದುಕಿಸಿದ ಟ್ರಾಫಿಕ್ ಪೊಲೀಸ್ ವಿಡಿಯೋ ವೈರಲ್ ಆಗಿದೆ.
ಸೈಬರಾಬಾದ್‌ನ ರಾಜೇಂದ್ರನಗರ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ರಾಜೀಂದರ್ ಎಂಬವರು ಹೃದಯಾಘಾತಕ್ಕೆ ಒಳಗಾಗಿದ್ದ ಎಲ್‌ಬಿ ನಗರದ ಬಾಲರಾಜು ಎನ್ನುವ ವ್ಯಕ್ತಿಗೆ ಕಾರ್ಡಿಯೋಪಲ್ಮನರಿ ರೆಸಸಿಟೇಶನ್ ಅನ್ನು ನೀಡಿ ಅವರ ಜೀವವನ್ನು ರಕ್ಷಣೆ ಮಾಡುವ ಮೂಲಕ ಮಾನವೀಯತೆಯನ್ನುಮೆರೆದಿದ್ದಾರೆ. ಬಳಿಕ ಸ್ಥಳೀಯ ಆಸ್ಪತ್ರೆಗೆ ತಕ್ಷಣವೇ ದಾಖಲು ಮಾಡಿ ಅವರ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆಂದು ವರದಿಯಾಗಿದೆ.
ಟ್ರಾಫಿಕ್ ಪೊಲೀಸ್ ರಾಜಶೇಖರ್ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಆತ ಕಾರ್ಯಕ್ಕೆ ನೆಟ್ಟಿಗರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Laxmi News 24×7