Breaking News

ನಗರಸಭೆ: ₹7.32 ಲಕ್ಷ ಉಳಿತಾಯ ಬಜೆಟ್‌

Spread the love

ಗೋಕಾಕ: ಇಲ್ಲಿನ ನಗರಸಭೆಯ 2023-24ನೇ ಸಾಲಿನ ₹7.32 ಲಕ್ಷದ ಉಳಿತಾಯದ ಬಜೆಟ್ ಅನ್ನು ಪ್ರಭಾರಿ ಪೌರಾಯುಕ್ತ ಶಿವಾನಂದ ಹಿರೇಮಠ ಅವರು, ಅಧ್ಯಕ್ಷ ಜಯಾನಂದ ಹುಣಚ್ಯಾಳಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಂಡಿಸಿದರು.

ನಗರದ ಸ್ವಚ್ಛತೆಗಾಗಿ 19 ಜನ ಪೌರಕಾರ್ಮಿಕರ ನೇಮಕ ಪ್ರಕ್ರಿಯೆ ನಡೆದಿದ್ದು, ಉಳಿದ ಕಾರ್ಮಿಕರನ್ನು ಹೊರಗುತ್ತಿಗೆ ಹಾಗೂ ನೇರ ಪಾವತಿ ಆಧಾರದ ಮೇಲೆ ಸೇವೆಯನ್ನು ಪಡೆಯುವ ಉದ್ದೇಶಕ್ಕೆ ₹3.84 ಕೋಟಿ ಅವಶ್ಯ ನಿಗದಿ ಮಾಡಿರುವುದಾಗಿ ತಿಳಿಸಿದರು.

 

ನಗರಸಭೆಯ ಲೆಕ್ಕ ಅಧೀಕ್ಷಕ ಎಂ.ಎನ್.ಸಾಗರೇಕರ ಅವರು ₹40.78 ಕೋಟಿ ಆಯ ಮತ್ತು ₹40.70 ಕೋಟಿ ವ್ಯಯದ ಅಂದಾಜುಗಳ ವಿವರಣೆ ನೀಡಿದರು. ನಗರದಲ್ಲಿ ಎಚ್.ಎಫ್.ಸಿ. ವಿಶೇಷ ಅನುದಾನದಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡೆಸಲು ₹19 ಕೋಟಿ ಖರ್ಚು ಮಾಡಲಾಗಿದ್ದು, ಬಾಕಿ ₹6 ಕೋಟಿಯ ಕಾಮಗಾರಿಗಳನ್ನು ಬರುವ ಆರ್ಥಿಕ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಸುಮಾರು ₹3 ಕೋಟಿ ಅನುದಾನದಲ್ಲಿ ₹1 ಕೋಟಿ ವೆಚ್ಚದ ವಾಣಿಜ್ಯ ಮಳಿಗೆಗಳ ಕಾಮಗಾರಿ ಮುಕ್ತಾಯಗೊಂಡಿದ್ದು, ಉಳಿದ ಕಾಮಗಾರಿಯನ್ನು ಮುಂದಿನ ವರ್ಷದಲ್ಲಿ ಪೂರೈಸಲು ಉದ್ದೇಶಿಸಲಾಗಿದೆ. 15ನೇ ಹಣಕಾಸು ಯೋಜನೆ ಒಳಗೊಂಡಂತೆ ರಸ್ತೆ, ಚರಂಡಿ, ಬೀದಿದೀಪ, ಉದ್ಯಾನವನ, ನೀರು ಸರಬರಾಜು, ಒಳಚರಂಡಿ ಇತ್ಯಾದಿ ಕಾಮಗಾರಿಗಳಿಗಾಗಿ ಆಯವ್ಯಯದಲ್ಲಿ ಒಟ್ಟು ₹12.78 ಕೋಟಿಯ ಕಾಮಗಾರಿಗಳನ್ನು ಪ್ರಸ್ತಾಪಿಸಲಾಗಿದೆ. ಶೇ 24.10, 7.25 ಮತ್ತು ಶೇ 5ದರ ವಿಭಾಗಗಳಲ್ಲಿ ₹ 28 ಲಕ್ಷ ಅಂದಾಜು ಖರ್ಚುಗಳ ಬಾಬ್ತುಗಳನ್ನು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷ ಬಸವರಾಜ ಆರೆನ್ನವರ, ಸ್ಥಾಯಿ ಸಮಿತಿ ಚೇರ್ಮನ್ ಸಿದ್ದಪ್ಪ ಹುಚ್ಚರಾಮಗೋಳ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ವಿ.ವೈ.ಪಾಟೀಲ, ಎಂ.ಎಚ್.ಗಜಾಕೋಶ ಹಾಗೂ ನಗರಸಭೆ ಸದಸ್ಯರು ಇದ್ದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ