ಗೋಕಾಕ : ಕೊರೊನಾ ಸೋಂಕು ನಿಯಂತ್ರಿಸಲು ಜನರು ಮಾಸ್ಕ್, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು 12ನೇ ಅಧಿಕ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿಜಯಕುಮಾರ ಎಂ.ಎ. ಹೇಳಿದರು.
ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆರೋಗ್ಯ ಇಲಾಖೆ, ತಾಲೂಕಾಡಳಿತ, ಶಿಕ್ಷಣ ಇಲಾಖೆ ಹಾಗೂ ಎಸ್‍ಎಲ್‍ಜೆ ಕಾನೂನು ಕಾಲೇಜ್ ಸಹಯೋಗದಲ್ಲಿ ನಡೆದ ಕೊರೊನಾ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯವನ್ನು ದೇಶ ಸೇವೆಯೆಂದು ತಿಳಿದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಕೋರೋನಾ ವೈರಸ್ಸನ್ನು ನಿಯಂತ್ರಿಸಲು ಶ್ರಮಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಸತೀಶ ಬಾಳಿ, 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಆರ್.ಚಂದ್ರಪ್ಪ ಹೊನ್ನೂರ, ವಕೀಲರ ಸಂಘದ ಅಧ್ಯಕ್ಷ ಯು.ಬಿ.ಶಿಂಪಿ, ಬಿಇಓ ಜಿ.ಬಿ.ಬಳಗಾರ, ಆರೋಗ್ಯ ಇಲಾಖೆಯ ಡಾ.ಜ್ಯೋತಿಲಕ್ಷ್ಮೀ ಅಂಗಡಿ, ಮಲ್ಲವ್ವ ನಾಯಿಕ, ಎಸ್‍ಎಲ್‍ಜೆ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯೆ ಪ್ರತಿಭಾ ಮೊರೆ ಸೇರಿದಂತೆ ಅನೇಕರು ಇದ್ದರು.
Laxmi News 24×7